ಐರ್ಲೆಂಡ್‌ನಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಉಪನ್ಯಾಸ

ಈ-ಶ್ರಮ್ ನೊಂದಣಿ ಮೂಲಕ ಅಸಂಘಟಿತ ಕಾರ್ಮಿಕರಿಗೂ ಸವಲತ್ತು:ಕಾರ್ಮಿಕ ಸಂಕ್ಷೇಮವೇ ಆದ್ಯತೆ

Team Udayavani, Sep 2, 2022, 4:17 PM IST

1-asd

ಡುಬ್ಲಿನ್ : ವಿವಿಧ ಬಗೆಯ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯಕ್ಕೆ ಪ್ರತಿಯಾಗಿ ಈ-ಶ್ರಮ್ ನೋಂದಣಿ ಮೂಲಕ ಶ್ರಮಿಕ ವರ್ಗವನ್ನು ಒಂದು ಚಾವಣಿ ಅಡಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರತಿಪಾದಿಸಿದರು.

ಐರ್ಲೆಂಡ್ ವ್ಯಯಕ್ತಿಕ ಪ್ರವಾಸ ಕೈಗೊಂಡಿರುವ ಅವರು, ಅಲ್ಲಿ “ಭಾರತ-ಐರ್ಲೆಂಡ್ ಸ್ನೇಹ ಉಪನ್ಯಾಸ ಮಾಲಿಕೆಯಡಿ ಭಾರತೀಯರಿಗೆ ವಿದೇಶಗಳಲ್ಲಿನ ಅವಕಾಶ- ಕರ್ನಾಟಕದ ದೃಷ್ಟಿಕೋನ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಭಾರತ ಸರ್ಕಾರವು ಅಸಂಘಟಿತ ಕಾರ್ಮಿಕರ ಬಗೆಗಿನ ದತ್ತಾಂಶ ಪಡೆದುಕೊಂಡು ಆ ಮೂಲಕ ಸವಲತ್ತುಗಳನ್ನು ಸುಲಲಿತವಾಗಿ ವಿತರಿಸುವ ಸಲುವಾಗಿ ಈ-ಶ್ರಮ್ ಪೋರ್ಟಲ್ ಆರಂಭಿಸಿದೆ, ಈ ಶ್ರಮ್ ಪೋರ್ಟಲ್‌ನಲ್ಲಿ ಕರ್ನಾಟಕವು 1.9 ಕೋಟಿ ಕಾರ್ಮಿಕರ ನೋಂದಣಿ ಗುರಿ ಹೊಂದಿದ್ದು, ಆ ಪೈಕಿ ಈವರೆಗೆ 70 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ನೊಂದಾಯಿತ ಕಾರ್ಮಿಕರು ಪ್ರಧಾನ ಮಂತ್ರಿ ಸುರಕ್ಷ ಭಿಮಾ ಯೋಜನೆಯಡಿ ಸವಲತ್ತುಗಳನ್ನು ಪಡೆಯಲು ಅರ್ಹರಾಗಲಿದ್ದು, 2 ಲಕ್ಷ ರೂ.ವರೆಗೆ ಪರಿಹಾರ ಸಿಗಲಿದೆ ಎಂದ ಸಚಿವರು, ಭಾರತವು ಅಂತರಾಷ್ಟ್ರೀಯ ವಲಸೆ ಕಾರ್ಮಿಕರ ಕೇಂದ್ರವನ್ನು ತೆರೆದಿದ್ದು, ಈ ಕೇಂದ್ರವು ಶ್ರಮಿಕ ವರ್ಗದವರಿಗೆ ತಮ್ಮ ಕೌಶಲ್ಯಕ್ಕೆ ತಕ್ಕಂತೆ ವಿದೇಶಗಳಲ್ಲಿ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಈ ಕೇಂದ್ರವು ವಲಸೆ ಕಾರ್ಮಿಕರಿಗೆ ಅಗತ್ಯ ತರಬೇತಿ ಜತೆಗೆ 10 ಲಕ್ಷ ರೂಪಾಯಿಗಳ ವಿಮೆಯೊಂದಿಗೆ ಸಾಮಾಜಿಕ ಭದ್ರತೆಯನ್ನೂ ನೀಡುತ್ತಿದೆ. ಇದರಿಂದ ಕಾರ್ಮಿಕರ ಆತ್ಮವಿಶ್ವಾಸದ ಜತೆಗೆ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶ್ರಮಿಕರ ಸಂಕ್ಷೇಮಕ್ಕೆ ಹತ್ತು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರತಿಪಾದಿಸಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು, ಮಹಿಳೆಯರಿಗೆ ರಾತ್ರಿ ಪಾಳೆಯದಲ್ಲೂ ಕಾರ್ಯನಿರ್ವಹಿಸಲು ಅನುಕೂಲವಾಗುವಂತಹ ಕಾಯ್ದೆಯನ್ನು ಜಾರಿ ಮಾಡಲಾಗಿದೆ ಮತ್ತು ಈ ಕಾಯ್ದೆಯಡಿ ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸುವ ಸ್ತ್ರೀಯರಿಗೆ ಅಗತ್ಯ ಅನುಕೂಲ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದರು.

ಕರ್ನಾಟಕದಲ್ಲಿ ಸಂಘಟಿತ, ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಗಳ ಜತೆ ಜತೆಗೆ ವಿವಿಧ ಕಾರ್ಮಿಕ ಸಂಕ್ಷೇಮ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು ಕಾರ್ಮಿಕ ಮತ್ತು ಮಾಲೀಕರ ನಡುವಿನ ಸಂಬAಧ ಸುಧಾರಣೆಗೆ ಸತತವಾಗಿ ಶ್ರಮಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಮಂಡಳಿ, ಇಎಸ್‌ಐ ಸೇವೆಗಳು, ಬಾಯ್ಲರ್ ವಿಭಾಗಗಳು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕಾರ್ಮಿಕ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಆನಿವಾಸಿ ಭಾರತೀಯರಿಗೆ ವಿವರಿಸಿದ ಸಚಿವ ಹೆಬ್ಬಾರ್, ಕೋವಿಡ್ ಒಂದು ಮತ್ತು ಎರಡನೇ ಅಲೆ ವೇಳೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾರ್ಮಿಕರ ತ್ವರಿತ ಅಗತ್ಯಗಳಿಗೆ ಸ್ಪಂದಿಸಲಾಯಿತು ಎಂದರು.

ಜಾಗತಿಕ ಸಾಂಕ್ರಾಮಿಕ್ ಕೋವಿಡ್-19ರ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ಸಿದ್ಧಪಡಿಸಿದ ಆಹಾರ ಪದಾರ್ಥ, ರೇಷನ್ ಕಿಟ್, ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಜತೆಗೆ ಒಂದು ಬಾರಿ ಆರ್ಥಿಕ ಸಹಾಯಧನವನ್ನೂ ವಿತರಿಸಲಾಯಿತು. ರಾಜ್ಯ ಸರ್ಕಾರವು ಕಾರ್ಮಿಕ ಮತ್ತು ಮಾಲೀಕನ ನಡುವಿನ ಸಂಬಂಧ ಸುಧಾರಣೆಗೆ ಅನುವಾಗುವಂತೆ ಹಲವು ಕಾಯ್ದೆ ಕಾನೂನುಗಳನ್ನು ಜಾರಿ ಮಾಡುತ್ತಿದ್ದು, ಶ್ರಮಿಕರ ಸಂಕ್ಷೇಮಕ್ಕೆ ಆದ್ಯತೆ ನೀಡಲಾಗಿದೆ. ವಿವಿಧ ವರ್ಗಗಳ ಶ್ರಮಿಕರಿಗೆ ಪ್ರತಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ನಿಗಧಿಪಡಿಸಲಾಗುತ್ತಿದೆ ಎಂದ ಅವರು, ರಾಜ್ಯ ಸರ್ಕಾರವು ಕಾರ್ಮಿಕ ಕಾಯ್ದೆಗಳಿಗೆ ಪ್ರತಿಯಾಗಿ 29 ಕಾನೂನುಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ಕಾರ್ಮಿಕ ನ್ಯಾಯಾಲಯಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದರು.

2006ರಲ್ಲಿ ಕೇಂದ್ರ ಸರ್ಕಾರದ ನೀತಿಯಂತೆ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೆಸ್ ಮೂಲಕ ಸಂಪನ್ಮೂಲ ಕ್ರೂಢೀಕರಣ ಮಾಡುತ್ತಿದ್ದು, ಕಾರ್ಮಿಕರಿಗೆ ಅಗತ್ಯ ತರಬೇತಿ ಜತೆಗೆ ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿದೆ. ಕಾರ್ಮಿಕರು ಮಾತ್ರವಲ್ಲದೆ, ಶ್ರಮಿಕರ ಕುಟುಂಬ ವರ್ಗಕ್ಕೂ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಜಾರಿ ಮಾಡಲಾಗಿದೆ ಎಂದ ಕಾರ್ಮಿಕರ ಸಚಿವರು, ಆರೋಗ್ಯ ತಪಾಸಣಾ ಶಿಬಿರ, ಮೊಬೈಲ್ ಕ್ಲಿನಿಕ್, ಶ್ರಮಿಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ತರಬೇತಿ, ಶಿಷ್ಯ ವೇತನ ಜತೆಗೆ ಅಸಂಘಟಿತ ಕಾರ್ಮಿಕ ವಲಯಕ್ಕೂ ಆಶಾದೀಪ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಸಾಧನೆಗಳ ಬಗ್ಗೆ ವಿವರಣೆ ನೀಡಿದರು.

ಇಎಸ್‌ಐ ಆಸ್ಪತ್ರೆಗಳ ಉನ್ನತೀಕರಣದ ಜತೆಗೆ ಶ್ರಮಿಕ ವರ್ಗಕ್ಕೆ ಆರೋಗ್ಯ ಸೇವೆಗಳು ಸುಲಭದಲ್ಲಿ ದಕ್ಕುವಂತೆ ಮಾಡುವ ಸಲುವಾಗಿ ಖಾಸಗಿ ಆಸ್ಪತ್ರೆಗಳೊಂದಿಗೂ ಸಮನ್ವಯ ಸಾಧಿಸಲಾಗಿದೆ. ಕೋವಿಡ್ ಸಂದರ್ಭ ಕಾರ್ಮಿಕ ಇಲಾಖೆಗೆ ಸವಾಲಿನ ಸಂದರ್ಭವನ್ನು ಸೃಷ್ಟಿಸಿತಾದರೂ, ಆಹಾರ ವಿತರಣೆ, ಸಾರಿಗೆ ವ್ಯವಸ್ಥೆ, ಆಹಾರ ಸಾಮಗ್ರಿಗಳ ವಿತರಣೆ ಜತೆಗೆ ಸಹಾಯಧನ ವಿತರಿಸಿರುವ ಬಗ್ಗೆ ವಿವರಣೆ ನೀಡಿದ ಕಾರ್ಮಿಕ ಸಚಿವರು ಕೋವಿಡ್ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ನಿಂತ ರಾಜ್ಯ ನಮ್ಮದು ಎಂದು ಹೆಮ್ಮೆಯಿಂದ ವಿವರಣೆ ನೀಡಿದರು.

ಸಭೆಯಲ್ಲಿ ಐರ್ಲೆಂಡ್‌ನ ಭಾರತೀಯ ರಾಯಭಾರಿ ಅಖಿಲೇಶ್ ಮಿಶ್ರ ಸೇರಿದಂತೆ ಹಲವು ಆನಿವಾಸಿ ಭಾರತೀಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.