ಮೋದಿ-ಬಿಎಸ್ವೈ ನಡುವೆ ವಿಶ್ವಾಸದ ಕೊರತೆ
Team Udayavani, Oct 5, 2019, 3:04 AM IST
ಮೈಸೂರು: ನೆರೆ ಪರಿಹಾರ ಸಂಬಂಧ ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಲು ರಾಜ್ಯ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ಮಾಜಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಹಾಗೂ ಯಡಿಯೂರಪ್ಪ ನಡುವೆ ವಿಶ್ವಾಸದ ಕೊರತೆಯಿದೆ. ಇವರಿಬ್ಬರ ನಡುವಿನ ವಿಶ್ವಾಸದ ಕೊರತೆಯಿಂದಾಗಿ ರಾಜ್ಯದ ಜನರು ತೊಂದರೆ ಅನುಭವಿಸಬೇಕಾಗಿ ಬಂದಿದೆ ಎಂದರು.
“ನಾನು ಮುಖ್ಯಮಂತ್ರಿ ಆಗಿದ್ದಾಗ ಕೊಡಗಿನಲ್ಲಿ ಪ್ರವಾಹ ಉಂಟಾಗಿತ್ತು. ಈ ವೇಳೆ, ಮೋದಿ ಅವರೇ ನನಗೆ ದೂರವಾಣಿ ಕರೆ ಮಾಡಿ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಿದ್ದರು. ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಆದರೆ, ಈಗ ಅವರ ಪಕ್ಷದ ಮುಖ್ಯಮಂತ್ರಿಗೇ ಚರ್ಚೆ ಮಾಡಲು ಅವಕಾಶ ಕೊಡ್ತಿಲ್ಲ, ಸಹಕಾರ ಕೊಡ್ತಿಲ್ಲ ಎನ್ನುವುದು ಯಾಕೆಂದು ಗೊತ್ತಾಗುತ್ತಿಲ್ಲ’ ಎಂದು ಹೇಳಿದರು.
ಯಾರಪ್ಪ ಅವನು ವಿಜಯೇಂದ್ರ?: ಯಾರಪ್ಪ ಅವನು? ದುಡ್ಡು ಲಪಟಾಯಿ ಸೋದು ಬಿಟ್ಟು, ಬೊಕ್ಕಸದ ಬಗ್ಗೆ ನಿನ್ನೆ-ಮೊನ್ನೆ ಬಂದ ಅವನಿಗೇನು ಗೊತ್ತು ಎಂದು ಕುಮಾರಸ್ವಾಮಿ ಕಿಡಿಕಾರಿದರು. ದೋಸ್ತಿ ಸರ್ಕಾರ ಇದ್ದಾಗ ರಾಜ್ಯದ ಬೊಕ್ಕಸ ಬರಿದಾ ಗಿದೆ ಎಂಬ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಕಿಡಿ ಕಾರಿದ ಅವರು, ದೊಡ್ಡ ನಾಯಕನೆಂದು ಬಿಂಬಿಸಿಕೊಂಡಾಕ್ಷಣ ಎಲ್ಲವೂ ಗೊತ್ತಾಗುತ್ತ ದೆಯೇ? ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ. ಅವನ ಬೊಕ್ಕಸ ಖಾಲಿಯಾಗಿದೆ. ಅದನ್ನು ತುಂಬಿಸಿಕೊಳ್ಳಲು ಹೊರಟಿದ್ದಾರೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.