ಕರುನಾಡಿನಲ್ಲಿ ಮೊಳಗಿದ ‘ಲಕ್ಷ ಕಂಠ ಗಾಯನ’
Team Udayavani, Oct 28, 2021, 1:01 PM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಗುರುವಾರ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲಕ್ಕೆ ಕನ್ನಡ ಗೀತಾ ಗಾಯನದಲ್ಲಿ ಪಾಲ್ಗೊಂಡು ಹಾಡಿದರು.
ಈ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರವಲ್ಲದೇ, ಕನ್ನಡ ನಾಡಿನ ಎಲ್ಲ ವರ್ಗದ ಜನರೂ ಭಾವಹಿಸಿದ್ದಾರೆ. ದೇಶದ ಇತರ ರಾಜ್ಯಗಳು ಮತ್ತು ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ಸಹ ಕನ್ನಡ ಗೀತೆಗಳನ್ನು ಹಾಡಿದ್ದಾರೆ. ಇವರಿಗಾಗಿ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಹಾಡುವ ತಾಂತ್ರಿಕ ಸಂಯೋಜನೆ ರೂಪಿಸಲಾಗಿತ್ತು
ನಾಡಿನ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳ ಆವರಣ, ವಿಶ್ವವಿದ್ಯಾಲಯಗಳ ಆವರಣ, ತಾಂತ್ರಿಕ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳ ಆವರಣ, ಮೈಸೂರು ಅರಮನೆ ಮುಂಭಾಗ, ಹಂಪಿಯ ಕಲ್ಲಿನ ರಥ, ಮಹಾನವಮಿ ದಿಬ್ಬ ಸೇರಿ ವಿವಿಧ ಜಿಲ್ಲೆಗಳ ಪ್ರಸಿದ್ಧ ಸ್ಮಾರಕಗಳ ಮುಂದೆ ಒಟ್ಟಿಗೆ ನಿಂತು ಹಾಡಲಾಗಿದೆ.
ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ವಿಶೇಷ – ಕನ್ನಡ ಗೀತ ಗಾಯನ
ಎಲ್ಲೆಲ್ಲಿ ಗಾಯನ
* ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳು
* ಬೆಂಗಳೂರು ಮೆಟ್ರೊದ ಎಲ್ಲ ರೈಲುಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಸುಗಮ ಸಂಗೀತ ಗಾಯನ ತಂಡಗಳು ಮೂರು ಗೀತೆಗಳನ್ನು ಹಾಡಲಾಗಿದೆ. ಮೆಟ್ರೊದ ಎಲ್ಲ 51 ನಿಲ್ದಾಣಗಳಲ್ಲಿ ಕನ್ನಡ ಗೀತೆಗಳ ಗಾಯನ ಧ್ವನಿ ವರ್ಧಕಗಳ ಮೂಲಕ ಪ್ರಸಾರವಾಗಲಿದೆ. ಅಲ್ಲದೆ, ಅತ್ಯಂತ ಜನನಿಬಿಡ 5 ಮೆಟ್ರೊ ನಿಲ್ದಾಣಗಳಲ್ಲಿ ಗಾಯನ ನಡೆಸಲಾಗಿದೆ.
* ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಸಚಿವ ವಿ.ಸುನಿಲ್ ಕುಮಾರ್, ಅಧಿಕಾರಿಗಳು, ಸಿಬ್ಬಂದಿ ಸೇರಿ 3 ಸಾವಿರ ಮಂದಿ ಭಾಗವಹಿಸಿದ್ದರು.
* ಜೋಗ ಜಲಪಾತದ ಮುಂದೆ, ಕುಪ್ಪಳಿಯ ಕವಿಶೈಲ, ಚಿತ್ರದುರ್ಗದ ಕೋಟೆ, ಮಂಗಳೂರಿನ ಕಡಲ ಕಿನಾರೆ, ಉಡುಪಿಯ ಶ್ರೀಕೃಷ್ಣ ದೇಗುಲ, ಮೂಡಬಿದಿರೆಯ ಸಾವಿರ ಕಂಬದ ಬಸದಿ, ಮಂಗಳೂರು ಬಂದರಿನ ಮೀನುಗಾರರ ಮಧ್ಯೆ
* ಸಿದ್ಧಗಂಗಾ ಮಠದ ಆವರಣ, ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇಗುಲ, ಭಾಗಮಂಡಲ, ಬೀದರ್‌ನ ಗೋಳ ಗುಮ್ಮಟ, ಬೇಲೂರು, ಹಳೇ ಬೀಡು, ಶ್ರವಣಬೆಳಗೊಳ, ಕನ್ನಡದ ಮೊದಲ ಶಾಸನ ದೊರೆತ ಹಲ್ಮಿಡಿ ಗ್ರಾಮ ಮುಂತಾದ ಸ್ಥಳಗಳಲ್ಲಿ ಹಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ’ಲಕ್ಷ ಕಂಠಗಳ ಗೀತಗಾಯನ’ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಹಲವರು ಕೂ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.