Lakshmi Hebbalkar ಬಿಜೆಪಿ, ಎಂಇಎಸ್ ಒಂದಾಗಿದ್ದರಿಂದ ಕಾಂಗ್ರೆಸ್‌ಗೆ ಸೋಲು
Team Udayavani, Jun 11, 2024, 12:12 AM IST
ಬೆಂಗಳೂರು: ಬೆಳಗಾವಿ ಲೋಕಸಭಾ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಮೇಲ್ನೋಟಕ್ಕೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಈ ಬಾರಿ ಹಾಗಿರಲಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿಗೆ ಅನೇಕ ಕಾರಣಗಳಿವೆ. ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲವೂ ವ್ಯಕ್ತವಾಗಿತ್ತು. ಹೀಗಿದ್ದರೂ ಫಲಿತಾಂಶ ನಮಗೆ ಕೈ ಕೊಟ್ಟಿತು. ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದರು.
ಕಾಂಗ್ರೆಸ್ ಸೋಲಿನ ಬಗ್ಗೆ ಹೈಕಮಾಂಡ್ ಪರಾಮರ್ಶೆ ಸಮಿತಿ ರಚಿಸಿರುವ ವರದಿ ಬಗ್ಗೆ ನನಗೆ ಗೊತ್ತಿಲ್ಲ. ರವಿವಾರ ಬೆಳಗಾವಿ ನಾಯಕರ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ನನಗೆ “ಸಾರಿ’ ಎಂದಿರುವುದು ಅವರ ದೊಡ್ಡ ಗುಣ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ.
-ಲಕ್ಷ್ಮೀ ಹೆಬ್ಬಾಳ್ಕರ್,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಗ್ಯಾರಂಟಿಗಳಿಗೆ ಹಿನ್ನಡೆ ಆಗಿಲ್ಲ. ಕಲ್ಯಾಣ ಕರ್ನಾಟಕದ ಐದು ಸ್ಥಾನಗಳಲ್ಲಿ ನಾವು ಗೆದ್ದಿರುವುದೇ ಗ್ಯಾರಂಟಿಗಳಿಂದ. ಗ್ಯಾರಂಟಿಗಳನ್ನು ಕೊಟ್ಟು, ಅನುಷ್ಠಾನ ಮಾಡಿದ್ದನ್ನು ಬಹಳಷ್ಟು ಕಡೆ ಪ್ರತಿ ಮನೆಗೆ ಹೋಗಿ ಮನದಟ್ಟು ಮಾಡುವಲ್ಲಿ ವಿಫಲರಾಗಿದ್ದೇವೆ ಎನಿಸುತ್ತದೆ. ಆದರೆ ಗ್ಯಾರಂಟಿ ಮುಂದುವರಿಸಬೇಕು ಎಂಬುದು ನಮ್ಮೆಲ್ಲರ ಅಭಿಪ್ರಾಯ.
– ಈಶ್ವರ್ ಖಂಡ್ರೆ, ಅರಣ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.