![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 1, 2019, 3:05 AM IST
ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನ್ಯೂಜೆರ್ಸಿಯ ಸೋಮರೈಟ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.
ಇಪ್ಪತ್ತು ಎಕರೆ ಪ್ರದೇಶದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಬಗ್ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಈ ದೇವಾಲಯವು ಭಾರತೀಯರ ಅದರಲ್ಲೂ ಕನ್ನಡಿಗರ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.
ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ . ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈ ಜೋಡಿಸಬೇಕು ಎಂದು ತಿಳಿಸಿದರು.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉಪಸ್ಥಿತರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.