20 ನೂತನ ಸ್ಟಾರ್ಟಪ್ ಉತ್ಪನ್ನಗಳ ಬಿಡುಗಡೆ
Team Udayavani, Nov 17, 2022, 10:04 PM IST
ಬೆಂಗಳೂರು: ಬಿಟಿಎಸ್ ಸಮಾವೇಶದ ಎರಡನೆಯ ದಿನವಾದ ಗುರುವಾರ ಐಟಿ ಮತ್ತು ಬಿಟಿ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಅವರು ಅಗ್ರಿಟೆಕ್, ಮೆಡ್‌ಟೆಕ್, ಎಡುಟೆಕ್ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿ ವಿವಿಧ ಸ್ಟಾರ್ಟಪ್‌ಗ್ಳು ಅಭಿವೃದ್ಧಿಪಡಿಸಿರುವ 20 ನೂತನ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭ ಮಾತನಾಡಿದ ಅವರು, 2025ರ ಒಳಗೆ ಬೆಂಗಳೂರಿನಲ್ಲಿ 20 ಸಾವಿರ ನವೋದ್ಯಮಗಳನ್ನು ಹೊಂದುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಈಗಾಗಲೇ ನಮ್ಮಲ್ಲಿ 22 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗ್ಳಿವೆ. ಬೆಂಗಳೂರಿನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವೇ ಇದಕ್ಕೆ ಕಾರಣವಾಗಿದೆ. ವೆಂಚರ್ ಕ್ಯಾಪಿಟಲ್ ಕ್ಷೇತ್ರದಲ್ಲಿ ನಮ್ಮ ನಗರವು ಇಡೀ ಜಗತ್ತಿನಲ್ಲೇ 5ನೇ ಸ್ಥಾನದಲ್ಲಿದೆ ಎಂದು ಹೇಳಿದರು.
ನೂತನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿರುವ ಸ್ಟಾರ್ಟಪ್‌ಗ್ಳಲ್ಲಿ ಹೆಚ್ಚಿನವು ಸರಕಾರದ ನಾನಾ ಇನ್‌ಕುÂಬೇಷನ್ ಕೇಂದ್ರಗಳ ಮಾರ್ಗದರ್ಶನ ಮತ್ತು ನೆರವು ಪಡೆದುಕೊಂಡಿದ್ದವು. ಈ ನಿಟ್ಟಿನಲ್ಲಿ ನಮ್ಮ ಕೆ-ಟೆಕ್ ನಾವೀನ್ಯ ಹಬ್‌ಗಳು, ಉತ್ಕೃಷ್ಟತಾ ಕೇಂದ್ರಗಳು, ಟೆಕ್ನಾಲಜಿ ಬಿಜಿನೆಸ್ ಪರಿಪೋಷಣ ಕೇಂದ್ರಗಳು, ಸಿ-ಕ್ಯಾಂಪ್, ಭಾರತೀಯ ವಿಜ್ಞಾನ ಸಂಸ್ಥೆ, ನಾಸ್ಕಾಂ ಮತ್ತು ಐಎಎಂಎಐ ತರಹದ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇಂದು ನೂತನ ಉತ್ಪನ್ನಗಳನ್ನು ಸಿದ್ಧಪಡಿಸಿರುವ 20 ನವೋದ್ಯಮಗಳ ಪೈಕಿ ಮೂರು ಕಂಪೆನಿಗಳನ್ನು ಮಹಿಳೆಯರೇ ಮುನ್ನಡೆಸುತ್ತಿರುವುದು ಶ್ಲಾಘನೀಯ ಸಂಗತಿ. ಬಿಡುಗಡೆಯಾಗಿರುವ ಉತ್ಪನ್ನಗಳಲ್ಲಿ ಕ್ಲೀನ್‌ಟೆಕ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಐಓಟಿ, ಬ್ಲಾಕ್‌ಚೈನ್, ಸೈಬರ್ ಸೆಕ್ಯುರಿಟಿ, ವಿದ್ಯುತ್ ಚಾಲಿತ ವಾಹನ ಮತ್ತು ಇಎಸ್‌ಡಿಎಂ ವಲಯಗಳಿಗೆ ಸೇರಿದ ಉತ್ಪನ್ನಗಳಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.