ಅಕ್ಟೋಬರ್ನಲ್ಲಿ ಕಾನೂನು ಪದವಿ ಅಂತಿಮ ಪರೀಕ್ಷೆ: ಮಾಧುಸ್ವಾಮಿ
Team Udayavani, Aug 26, 2020, 11:07 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕಾನೂನು ಪದವಿಯ ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಅಕ್ಟೋಬರ್ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 21ರಿಂದ ನಡೆಸಲು ಉದ್ದೇಶಿಸಲಾಗಿದ್ದ ಕಾನೂನು ಪದವಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್ ಪರೀಕ್ಷೆ ಮಾತ್ರ ಅಕ್ಟೋಬರ್ನಲ್ಲಿ ನಡೆಸಲಾಗುವುದು ಎಂದು ಹೇಳಿದರು. ಕಾನೂನು ಪದವಿ ಕಾಲೇಜುಗಳ ಪರೀಕ್ಷೆಗಳನ್ನು ಮುಂದೂಡುವಂತೆ ಅನೇಕರು ಆಗ್ರಹಿಸಿದ್ದಾರೆ. ಹೀಗಾಗಿ, ಅಕ್ಟೋಬರ್ ಅಥವಾ ಅಂದಿನ ಪರಿಸ್ಥಿತಿಯನ್ನು ನೋಡಿಕೊಂಡು ಹೊಸ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.