ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು
Team Udayavani, Mar 25, 2022, 11:30 PM IST
ಬೆಂಗಳೂರು: ಸ್ವಾಮೀಜಿಗಳ ಕುರಿತ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜತೆ ಉತ್ತಮ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮಿಗಳಿಗೆ ಅವಮಾನ ಮಾಡಿಲ್ಲ. ಅಗೌರವ ತೋರಿಲ್ಲ, ಅನಗತ್ಯವಾಗಿ ನನ್ನ ಹೇಳಿಕೆ ತಿರುಚಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವುದು ವಿಷಾದನೀಯ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕೆ ಅವರು ಮೌನವಾಗಿದ್ದಾರೆ. ಅವರಿಗೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.