“ಲೀಸ್ ಕಂ ಸೇಲ್ ಡೀಡ್’ ಮಾದರಿಯಲ್ಲಿ ಕೈಗಾರಿಕೆಗಳಿಗೆ ಜಮೀನು
Team Udayavani, Mar 2, 2017, 3:50 AM IST
ಬೆಂಗಳೂರು: ಏಕಘಟಕ ಯೋಜನೆಯಡಿ ಕೈಗಾರಿಕೆ ಹಾಗೂ ವಸತಿ ಸಂಕೀರ್ಣಕ್ಕೆ ಕೆಐಎಡಿಬಿ ಮಧ್ಯಸ್ಥಿಕೆಯಲ್ಲಿ ಖುದ್ದು ಹಣ
ಪಾವತಿ ಮಾಡಿ ಪಡೆಯುವ ಜಮೀನಿಗೆ ಪ್ರಸ್ತುತ ಇರುವ 99 ವರ್ಷ ಲೀಸ್ ನಿರ್ಬಂಧ ತೆಗೆದು ಹಾಕಿ, “ಲೀಸ್ ಕಂ ಸೇಲ್ ಡೀಡ್’
ಮಾಡಿಕೊಡಲು ನಿಯಮಾವಳಿಗೆ ತಿದ್ದುಪಡಿ ತರಲು ಸಚಿವ ಸಂಪುಟ ತೀರ್ಮಾನಿಸಿದೆ.
ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಈ ಬಗ್ಗೆ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತ
ನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರಿ, ಸಾರ್ವಜನಿಕ ಸ್ವಾಮ್ಯ, ಕೇಂದ್ರ-ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಗಳು, ಏಕಘಟಕದಡಿ ಕೈಗಾರಿಕೆ ಹಾಗೂ ವಸತಿ ಯೋಜನೆಗಳಿಗೆ ಪಡೆಯುವ
ಹಾಗೂ ರಾಜ್ಯದಲ್ಲಿ ಕೈಗಾರಿಕೆ ನೀತಿ ಜಾರಿಗೆ ಬಂದ ನಂತರ ಪಡೆದಿರುವ ಜಮೀನುಗಳಿಗೆ ಇದು ಅನ್ವಯವಾಗುತ್ತದೆ. ಕೆಐಎಡಿಬಿ
ಮಧ್ಯಸ್ಥಿಕೆಯಲ್ಲಿ ಕೈಗಾರಿಕೆ ಅಥವಾ ವಸತಿ ಯೋಜನೆ ಪ್ರಾರಂಭಿಸಲು ಇಚ್ಛಿಸಿರುವವರು ತಾವೇ ಸ್ವಾಧೀನಪಡಿಸಿಕೊಂಡ ಜಮೀನಿಗೆ
ಪರಿಹಾರ ನೀಡಿದ್ದರೆ ಅಂತಹ ಪ್ರಕರಣಗಳಿಗೆ ಮಾತ್ರ ಇದು ಅನ್ವಯ ಎಂದು ತಿಳಿಸಿದರು.
ಈ ಹಿಂದೆ 30 ವರ್ಷಗಳ ಕಾಲ ಇದ್ದ ಲೀಸ್ ಪದಟಛಿತಿಯನ್ನು ನಮ್ಮ ಸರ್ಕಾರ 99 ವರ್ಷ ವಿಸ್ತರಿಸಿತ್ತು. ಆದರೆ, ಇದರಿಂದ
ಸಾಕಷ್ಟು ತೊಂದರೆಗಳಾಗುತ್ತವೆ. ಸರ್ಕಾರಿ ಸ್ವಾಮ್ಯ, ಸಾರ್ವಜನಿಕ ಸ್ವಾಮ್ಯದ ಕಂಪನಿಗಳಿಗೆ ಈ ರೀತಿ ಮಾಡುವುದರಿಂದ
ತೊಂದರೆ ಯಾಗುತ್ತಿದೆ ಎಂದು ಸಮರ್ಥಿಸಿಕೊಂಡರು.
ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ: ಜಲಸಂಪನ್ಮೂಲ ಇಲಾಖೆಯಲ್ಲಿ 700 ಕಿರಿಯ ಅಭಿಯಂತರ ಹಾಗೂ 1200
ಸಹಾಯಕ ಅಭಿಯಂತರ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಅನುಷ್ಟಾನದ ಹಿನ್ನೆಲೆಯಲ್ಲಿ ಅಭಿಯಂತರರ ಕೊರತೆ ಇರುವುದರಿಂದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ತುಂಬಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.