ವರ್ಗಾವಣೆ ಮಾರ್ಗಸೂಚಿ ಮಾರ್ಪಾಡಿಗೆ ಉಪನ್ಯಾಸಕರ ಆಗ್ರಹ
Team Udayavani, Feb 3, 2018, 10:56 AM IST
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆ ಮಾರ್ಗಸೂಚಿಯಲ್ಲಿ ತುರ್ತಾಗಿ ಕೆಲವು ಮಾರ್ಪಾಡು ಮಾಡುವಂತೆ ಆಗ್ರಹಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಪಿಯು ಇಲಾಖೆ ನಿರ್ದೇಶಕರಿಗೆ ಮನವಿ
ಸಲ್ಲಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2007ರ ತಿದ್ದುಪಡಿ ಕಾಯ್ದೆ 2017ರ ಪರಿಚ್ಛೇದ 10(1)ರ ಅಡಿಯಲ್ಲಿ ಪತಿ-ಪತ್ನಿ ಪ್ರಕರಣದಡಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಕನಿಷ್ಠ ಸೇವಾ ಅನ್ವಯವಾಗುವುದಿಲ್ಲ ಎಂಬುದು
ಕಾಯ್ದೆಯಲ್ಲಿದ್ದರೂ, ವರ್ಗಾವಣೆ ಮಾರ್ಗಸೂಚಿಯಲ್ಲಿ ಕನಿಷ್ಠ ಸೇವಾವಧಿ 5 ವರ್ಷ ಎಂದು ನಮೂದಿಸಲಾಗಿದೆ. ಇದರಿಂದ ಪತಿ-ಪತ್ನಿ ಪ್ರಕರಣದಡಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ತೊಂದರೆಯಾಗುತ್ತದೆ ಇದನ್ನು ಮೂರು ವರ್ಷಕ್ಕೆ ಇಳಿಸಬೇಕು ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಆಗ್ರಹಿಸಿದ್ದಾರೆ. ವರ್ಗಾವಣೆ ಅರ್ಜಿ ಸಲ್ಲಿಸುವ ಕನಿಷ್ಠ ಸೇವಾರ್ಹತೆಯನ್ನು ಐದು ವರ್ಷ ಎಂದು ತಿಳಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿಗದಿ ಪಡಿಸಿರುವ ಮಾರ್ಗಸೂಚಿಯಲ್ಲಿ 3 ವರ್ಷ ಎಂದಿದೆ. ಹೀಗಾಗಿ ಕನಿಷ್ಠ ಸೇವಾರ್ಹತೆಯನ್ನು 3 ವರ್ಷಕ್ಕೆ ಇಳಿಸಬೇಕು. ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆ ಸಂಬಂಧಿಸಿದಂತೆ ಮಾರ್ಗಸೂಚಿಯಲ್ಲಿ ಯಾವುದೇ ಮಾಹಿತಿ ಇಲ್ಲ. ಹೆಚ್ಚುವರಿ ಉಪನ್ಯಾಸಕರಿಗೆ ಶೇ.5ರಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ವರ್ಗಾವಣೆಗೆ
ಅರ್ಜಿ ಸಲ್ಲಿಸಲು ಇಲಾಖೆ ರಚಿಸಿರುವ ಅಂತರ್ಜಾಲ ತಂತ್ರಾಂಶ ಉಪನ್ಯಾಸಕರ ಸ್ನೇಹಿಯಾಗಿಲ್ಲ. ಅರ್ಜಿ ಸಲ್ಲಿಕೆಗೆ ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪಿಯು ಉಪನ್ಯಾಸಕರ ವರ್ಗಾವಣೆ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದ್ದೇವೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮುಗಿದ ನಂತರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುತ್ತದೆ. ಉಪನ್ಯಾಸಕರ ಸಂಘದಿಂದ ನೀಡಿರುವ ಮನವಿ ಪರಿಶೀಲಿಸಲಾಗುವುದು.
ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.