ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ
Team Udayavani, Jul 26, 2023, 2:56 PM IST
ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.