ದೇಶದೆಲ್ಲೆಡೆ ಏಕರೂಪದ ವಾಹನ ತೆರಿಗೆ ಅಧಿವೇಶನದಲ್ಲಿ ಕಾನೂನು
Team Udayavani, Jan 29, 2020, 3:06 AM IST
ಬೆಂಗಳೂರು: ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ಟ್ಯಾಕ್ಸ್ ತರಲು ನಿರ್ಧರಿಸಿರುವುದರಿಂದ ರಾಜ್ಯ ಸರ್ಕಾರವೂ ಮುಂದಿನ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಹೆಚ್ಚು ಬೆಲೆಯುಳ್ಳ ವಾಹನಗಳ ನೋಂದಣಿ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿ ಇಲ್ಲಿಗೆ ತರುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಲ್ಲೂ ಒಂದೇ ರೀತಿಯ ತೆರಿಗೆ ಪದ್ಧತಿ ಜಾರಿಗೊಳಿಸಲು ಮುಂದಾಗಿದೆ ಎಂದರು. ಕೇಂದ್ರ ಸರ್ಕಾರದ ಕ್ರಮಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕಾನೂನು ರೂಪಿಸಿ ವಿಧಾನಮಂಡಲದ ಒಪ್ಪಿಗೆ ಪಡೆಯಲಿದೆ ಎಂದು ಹೇಳಿದರು.
ಒನ್ ನೇಷನ್ ಒನ್ ಟ್ಯಾಕ್ಸ್ ಪದ್ಧತಿ ಜಾರಿಗೆ ಬಂದರೆ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಕೊರತೆ ಆಗಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಶೇ.16, 18, ಹಾಗೂ 20 ಮೂರು ಸ್ಲಾéಬ್‌ಗಳಲ್ಲಿ ತೆರಿಗೆ ಹಾಕುತ್ತಿದೆ. ಕೇಂದ್ರ ಸರ್ಕಾರವು ಶೇ.8, 12, 10 ರಷ್ಟು ತೆರಿಗೆ ಹಾಕುತ್ತಿದೆ. ಹೀಗಾಗಿ, ಕೊರತೆಯಾಗಬಹುದು. ಆದರೆ, ಅದಕ್ಕೆ ಪರಿಹಾರೋಪಾಯ ಕಂಡು ಹಿಡಿಯಲಾಗುವುದು ಎಂದು ತಿಳಿಸಿದರು.
ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಅವರು, 1.30 ಲಕ್ಷ ಚಾಲಕರು ಹಾಗೂ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮನ್ನೂ ಸರ್ಕಾರಿ ನೌಕರರು ಅಂತ ಪರಿಗಣಿಸಲು ಬೇಡಿಕೆ ಇದೆ. ಈ ಬಗ್ಗೆ ಸಮಿತಿ ರಚಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಹೇಳಿದರು.
ಹೊಸ ಬಸ್ ಖರೀದಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 1200 ಹೊಸ ಬಸ್‌ಗಳ ಖರೀದಿಗೆ ತೀರ್ಮಾನಿಸಲಾಗಿದೆ. ಆ ಪೈಕಿ 356 ಬಸ್ ಬಿಎಂಟಿಸಿಗೂ ಲಭ್ಯವಾಗಲಿವೆ. ಎಲೆಕ್ಟ್ರಿಕ್ ಬಸ್ ಖರೀದಿ ಸಂಬಂಧ ಒಂದು ಸಂಸ್ಥೆ ಮುಂದೆ ಬಂದಿತ್ತು. ಆದರೆ, ಸಿಂಗಲ್ ಟೆಂಡರ್ ಮಾತ್ರ ಆಗಿ ದರದಲ್ಲಿ ನಮಗೆ ಸಮಾಧಾನವಾಗಲಿಲ್ಲ. ಹೀಗಾಗಿ, ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆದಿದ್ದೇವೆ. 300 ಎಲೆಕ್ಟ್ರಿಕ್ ಬಸ್ ಬಂದರೆ ಬೆಂಗಳೂರಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.