ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾನೂನು ತೊಡಕು ನಿವಾರಣೆ
Team Udayavani, Jun 2, 2019, 3:05 AM IST
ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಬೇಕಿದ್ದ 39 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೆಲವೊಂದು ಸ್ಥಳೀಯ ಸಂಸ್ಥೆಗಳಿಗೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.
ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ಈ ಆದೇಶದಿಂದ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಹಾದಿ ಸುಗಮವಾದಂತಾಗಿದೆ. ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಶೀಘ್ರ ಇತ್ಯರ್ಥಗೊಂಡರೆ, ಬಾಕಿ ಉಳಿದಿರುವ 39 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.
ವಾರ್ಡ್ ಮೀಸಲಾತಿ ಹಾಗೂ ಕೇತ್ರ ಪುನರ್‌ವಿಂಗಡಣೆ ಕುರಿತು ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಮೇಲ್ಮನವಿ ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎಲ್.ನಾರಾಯಣಸ್ವಾಮಿ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ತೀರ್ಪು ಪ್ರಕಟಿಸಿ ಏಕದಸಸ್ಯ ನ್ಯಾಯಪೀಠದ ಆದೇಶವನ್ನು ರದ್ದುಪಡಿಸಿತು.
ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ವಿಭಾಗೀಯ ನ್ಯಾಯಪೀಠ, ನಿಕಟಪೂರ್ವ ಜನಗಣತಿ ಆಧರಿಸಿ ಮೀಸಲಾತಿ ನಿಗದಿಪಡಿಸಬೇಕೆಂದು ಸುಪ್ರೀಂಕೋರ್ಟ್ ಸಂಗಪ್ಪ ಪ್ರಕರಣದಲ್ಲಿ ತೀರ್ಪು ನೀಡಿದೆ. ಹಾಗೆಯೇ, ಚುನಾವಣಾ ಆಯೋಗವು ಆದಷ್ಟು ಶೀಘ್ರ ಚುನಾವಣೆ ನಡೆಸಬೇಕೆಂದು ಕಿಶನ್‌ಸಿಂಗ್ ತೋಮರ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಆದ್ದರಿಂದ ಮಂಗಳೂರು ಮಹಾನಗರ ಪಾಲಿಕೆ ಸೇರಿ 13 ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ 2018ರ ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಮಧ್ಯಪ್ರವೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ಅದೇ ರೀತಿ, 13 ನಗರ ಸ್ಥಳೀಯ ಸಂಸ್ಥೆಗಳಿಗೆ 14 ದಿನಗಳಲ್ಲಿ ನಿಗದಿತ ಮಾರ್ಗಸೂಚಿ ಹಾಗೂ ನ್ಯಾಯಪೀಠ ವ್ಯಕ್ತಪಡಿಸಿದ ಅಭಿಪ್ರಾಯಗಳ ಪ್ರಕಾರ ಮೀಸಲು ಪ್ರಕ್ರಿಯೆಯನ್ನು “ರೀಡು” (ಮರು ನಿಗದಿ) ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಿತು. 2019ರ ಜ.14ರಂದು ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದ್ದು ತಪ್ಪು ಎಂದು ವಿಭಾಗೀಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.
ಚುನಾವಣಾ ತಕರಾರು ಏನಿತ್ತು?: ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಆಕ್ಷೇಪಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಮಂಗಳೂರಿನ ರವೀಂದ್ರ ನಾಯಕ್ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೆ, ಇನ್ನುಳಿದ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಕುರಿತು 25ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾ.ಸುನೀಲ್‌ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಾದ ಪುರಸ್ಕರಿಸಿ, ರಾಜ್ಯ ಸರ್ಕಾರದ ಅಧಿಸೂಚನೆ ರದ್ದುಪಡಿಸಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಚುನಾವಣೆ ಹಾದಿ ಸುಗಮಗೊಂಡ ಸ್ಥಳೀಯ ಸಂಸ್ಥೆಗಳು: ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಮಗಳೂರು ನಗರಸಭೆ, ಚನ್ನರಾಯಪಟ್ಟಣ ಪುರಸಭೆ, ರಾಮನಗರ ನಗರಸಭೆ, ದೊಡ್ಡಬಳ್ಳಾಪುರ ನಗರಸಭೆ, ಗುಡಿಬಂಡೆ ಪಟ್ಟಣ ಪಂಚಾಯಿತಿ, ವಿಜಯಪುರ ಪುರಸಭೆ, ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ, ಶಿರಾ ನಗರಸಭೆ, ತರೀಕೆರೆ ಪುರಸಭೆ, ಬೇಲೂರು ಪುರಸಭೆ, ಮಡಿಕೇರಿ ನಗರಸಭೆ.
ಹೈಕೋರ್ಟ್ ತೀರ್ಪಿನಿಂದ ಸುಮಾರು 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಚುನಾವಣೆಗೆ ಎದುರಾಗಿದ್ದ ಕಾನೂನು ತೊಡಕು ದೂರವಾಗಿದೆ. ಈಗ ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥಗೊಂಡರೆ ಬಾಕಿ ಇರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಾರಿ ಸುಗಮವಾಗಲಿದೆ.
-ಪಿ.ಎನ್ ಶ್ರೀನಿವಾಸಾಚಾರಿ, ರಾಜ್ಯ ಚುನಾವಣಾ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.