ಪರಿಷತ್ ಚುನಾವಣೆ: ಯಾರ ಲೆಕ್ಕಾಚಾರ ಏನು?
Team Udayavani, May 11, 2022, 7:10 AM IST
ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅತ್ತ ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗೆ ಚುನಾವಣೆ ನಡೆಸುವ ಸವಾಲಿನ ನಡುವೆ ಇತ್ತ ಪರಿಷತ್‌ನ ಚುನಾವಣೆಗೂ ಮೂರೂ ಪಕ್ಷಗಳು ಸಜ್ಜಾಗಬೇಕಾಗಿದೆ. ಏಳು ಸ್ಥಾನಗಳಲ್ಲಿ ಯಾರಿಗೆ ಎಷ್ಟು ಸ್ಥಾನ ಹಾಗೂ ಏನು ಲೆಕ್ಕಾಚಾರ ಎಂಬುದು ಹೀಗಿದೆ…
2 ಸ್ಥಾನ ಗೆಲ್ಲುವ ಅವಕಾಶ:
2 ಡಜನ್ ಆಕಾಂಕ್ಷಿಗಳು
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನ ಗೆಲ್ಲುವ ಅವಕಾಶವಿದ್ದು ಎರಡು ಡಜನ್ ಆಕಾಂಕ್ಷಿಗಳು ಕಾಯುತ್ತಿದ್ದಾರೆ. ಪ್ರಮುಖ ವಾಗಿ ಮಾಜಿ ಸಭಾಪತಿಗಳಾದ ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಪುಷ್ಪಾ ಅಮರನಾಥ್, ಎಸ್.ಎ. ಹುಸೇನ್, ನಿವೇದಿತ್ ಆಳ್ವ, ಮನ್ಸೂರ್ ಅಲಿ ಖಾನ್, ಮಾಜಿ ಮೇಯರ್ ರಾಮಚಂದ್ರಪ್ಪ ಹೀಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಜತೆಗೆ, ಪ್ರಸ್ತುತ ನಿವೃತ್ತಿಯಾಗುತ್ತಿರುವ ಆರ್.ಬಿ. ತಿಮ್ಮಾಪುರ್, ವೀಣಾ ಅಚ್ಚಯ್ಯ, ಅಲ್ಲಂ ವೀರಭದ್ರಪ್ಪ ಅವರೂ ಮತ್ತೂಂದು ಅವಧಿಗೆ ಮುಂದುವರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಜೆಡಿಎಸ್‌ನಲ್ಲಿ 1 ಸ್ಥಾನ; ಮೂವರು ಅಭ್ಯರ್ಥಿಗಳು
ಜೆಡಿಎಸ್ ಪಕ್ಷಕ್ಕೆ ಒಂದು ಸ್ಥಾನ ಸಿಗುವ ಅವಕಾಶ ಇದ್ದು ಹಾಲಿ ಸದಸ್ಯ ರಮೇಶ್ ಗೌಡ ಮುಂದುವರಿಯಲು ಬಯಸಿದ್ದು, ಟಿ.ಎ. ಶರವಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆಯೇ ಪಕ್ಷದ ನಾಯಕರು ಇವರಿಗೆ ಆಶ್ವಾಸನೆ ನೀಡಿದ್ದರು ಎಂದು ಹೇಳಲಾಗಿದೆ. ಇದರ ನಡುವೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸೇರಿರುವ ಸಿ.ಎಂ. ಇಬ್ರಾಹಿಂ, ರಾಜ್ಯ ಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೆಸರು ಕೇಳಿಬರುತ್ತಿದೆ.
ನಿಷ್ಠ ಕಾರ್ಯಕರ್ತರಿಗೆ ಮಣೆ?
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿಯಲ್ಲಿ ಹಲವರು ಕಣ್ಣಿಟ್ಟಿದ್ದು, ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕಲ್ಪಿಸುವ ಬಗ್ಗೆ ಆಲೋಚನೆ ನಡೆಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸ್ಥಾನಗಳು ಜೂನ್‌ನಲ್ಲಿ ಖಾಲಿ ಯಾಗಲಿದ್ದು, ವಿಧಾನ ಸಭೆ ಯಲ್ಲಿನ ಬಿಜೆಪಿ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ ದೊರೆಯಲಿವೆ. ಪ್ರಸ್ತುತ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಲೆಹರ್ ಸಿಂಗ್ ಹಾಲಿ ಸದಸ್ಯರಿದ್ದಾರೆ. ಇಬ್ಬರೂ ಸದಸ್ಯರು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿದ್ದು, ಇಬ್ಬರೂ ಪುನರಾಯ್ಕೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಆದರೆ, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಅಧಿವೇಶನದಲ್ಲಿ ಲೆಹರ್ ಸಿಂಗ್ ಪರಿಷತ್ತಿನಲ್ಲಿ ತಮ್ಮದು ಕೊನೆಯ ಭಾಷಣ ಎಂದು ಹೇಳಿರುವುದರಿಂದ ಹೊಸಬರಿಗೆ ಅವಕಾಶ ದೊರೆಯುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡಿªದಾರೆ.
ಆಕಾಂಕ್ಷಿಗಳ ಕಣ್ಣು
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನಾ, ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಜಗದೀಶ್ ಹಿರೇಮನಿ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.