ವಿಧಾನಪರಿಷತ್ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಸಭೆ
Team Udayavani, May 26, 2024, 7:40 AM IST
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿರುವ ಬಿಜೆಪಿ-ಜೆಡಿಎಸ್, ಬೆಂಗಳೂರು ಪದವೀಧರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕುರಿತಂತೆ ಮೇ 26ರಂದು ಜಂಟಿ ಸಭೆ ನಡೆಸಲಿವೆ.
ಭಾನುವಾರ ಬೆಳಗ್ಗೆ 11ಗಂಟೆಗೆ ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸಭೆ ನಡೆಯಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಾದ ಆರ್.ಅಶೋಕ, ಡಾ.ಸಿ.ಎನ್. ಅಶ್ವತ್ಥನಾರಾಯಣ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.
ಆರು ಕ್ಷೇತ್ರಗಳ ಪೈಕಿ 4:2 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಮಿತ್ರಪಕ್ಷಗಳು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಅ.ದೇವೇಗೌಡ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಡಾ.ವೈ.ಎ. ನಾರಾಯಣಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಿವೆ.
ಉಭಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಮೈತ್ರಿ ನಾಯಕರು ತಂತ್ರಗಾರಿಕೆ ಹೆಣೆಯಲಿದ್ದು, ಕಾರ್ಯಕರ್ತರು ಯಾವ ಕೆಲಸ ಮಾಡಬೇಕು ಎಂಬ ಮಾರ್ಗದರ್ಶನ ಮಾಡಲಿದ್ದಾರೆ. ಅಷ್ಟೇ ಅಲ್ಲದೆ, ಶಿಕ್ಷಕರು, ಮತ್ತು ಪದವೀಧರರನ್ನು ತಲುಪುವುದು ಹೇಗೆ? ಮತವಾಗಿ ಪರಿವರ್ತಿಸುವುದು ಹೇಗೆ ಎಂಬುದರ ಕುರಿತು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.