ವಿಧಾನಪರಿಷತ್ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ
ಪರಿಷತ್ ಬಹುಮತಕ್ಕೆ ಸಿಎಂ, ನಳಿನ್ ಕಾರ್ಯತಂತ್ರ
Team Udayavani, Dec 2, 2021, 7:03 AM IST
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನುಗೆಲ್ಲಿಸಿಕೊಂಡು ಬರುವ ಹೊಣೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರದು.
ಚುನಾವಣೆ ಸಂಬಂಧ ಜಿಲ್ಲೆಗಳಿಗೆ ನಿಯೋಜನೆ ಆಗಿರುವ ಸಚಿವರಿಗೆ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೊಣೆ ಗಾರಿಕೆ ವಹಿಸಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖ ವಾಗುವಂತೆ ನಿರ್ದೇಶನ ನೀಡಿದ್ದಾರೆ.
ಆಡಳಿತ ಪಕ್ಷ ಬಿಜೆಪಿಗೆ ಮೇಲ್ಮನೆಯಲ್ಲಿ ಬಹುಮತ ಗಳಿಸುವುದು ಅನಿವಾರ್ಯ. ಹೀಗಾಗಿ ಪಕ್ಷದ ಅಭ್ಯರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಗೆಲ್ಲಿಸಿ ಕೊಡ ಬೇಕು. ಇಲ್ಲವಾದಲ್ಲಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲು ಪಕ್ಷ ನಿರ್ಧರಿಸಿದೆ. ಪರಿಷತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿಗೆ ಅವಕಾಶವಿದೆ. ಈ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಬಿಜೆಪಿ ಗೆದ್ದರೆ ಪರಿಷತ್ತಿನಲ್ಲಿಯೂ ಸ್ಪಷ್ಟ ಬಹುಮತ ದೊರೆಯಲಿದೆ.
ಸದ್ಯ ಮೇಲ್ಮನೆಯ 75 ಸ್ಥಾನಗಳ ಪೈಕಿ ಬಿಜೆಪಿ ಸದಸ್ಯರು 32 ಇದ್ದು, ಕಾಂಗ್ರೆಸ್ 28, ಜೆಡಿಎಸ್ 11; ಒಬ್ಬರು ಪಕ್ಷೇತರರು ಮತ್ತು ಒಬ್ಬರು ಸಭಾಪತಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಹಾಲಿ ಬಿಜೆಪಿಯ 6 ಜನ ಸದಸ್ಯರಿದ್ದು, ಈಗಿರುವ ಪರಿಷತ್ ಸಂಖ್ಯಾ ಬಲದ ಆಧಾರದಲ್ಲಿ ಬಹುಮತ ಪಡೆಯಲು ಆ ಆರು ಸ್ಥಾನಗಳನ್ನು ಗೆಲ್ಲುವುದರ ಜತೆಗೆ ಹೆಚ್ಚಿಗೆ 9 ಸ್ಥಾನ ಗೆಲ್ಲಬೇಕಿದೆ. ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆದ್ದರೆ ಮಾತ್ರ ಬಿಜೆಪಿ ಬಹುಮತ ಪಡೆಯಲು ಸಾಧ್ಯ.
ಇದನ್ನೂ ಓದಿ:ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು
ಜಂಟಿ ತಂತ್ರ
ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ಚುನಾವಣೆಯಲ್ಲಿ ಪಕ್ಷದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಜಂಟಿ ಕಾರ್ಯತಂತ್ರ ರೂಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಷದ ವತಿಯಿಂದ ಪ್ರಧಾನ ಕಾರ್ಯದರ್ಶಿಗಳಿಂದ ಬೂತ್ ಮಟ್ಟದ ಕಾರ್ಯಕರ್ತರ ವರೆಗೆ ಎಲ್ಲರೂ ಪಕ್ಷದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ಕೊಡಿಸಲು ಶ್ರಮಿಸಬೇಕು. ಆಯಾ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲೆಯಲ್ಲಿಯೇ ಇದ್ದು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಬಿಜೆಪಿ ವರಿಷ್ಠರೂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಬೆಂಬಲದ ವಿಶ್ವಾಸ
ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಜೆಡಿಎಸ್‌ಗೆ ಬಹಿರಂಗ ಮನವಿ ಮಾಡಿದ್ದಾರೆ. ಜೆಡಿಎಸ್ ನೇರವಾಗಿ ಭರವಸೆ ನೀಡದಿದ್ದರೂ ಪರೋಕ್ಷವಾಗಿ ಬೆಂಬಲಿಸುವ ವಿಶ್ವಾಸದಲ್ಲಿ ರಾಜ್ಯ ಬಿಜೆಪಿ ನಾಯಕರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗಳು ಮತ್ತು ಮಾಜಿ ಪ್ರಧಾನಿ ದೇವೇಗೌಡರ ನಡೆ ಪಕ್ಷಕ್ಕೆ ಪೂರಕವಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.