![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 11, 2022, 7:40 AM IST
ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ.
ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ ಬಿಜೆಪಿ ಕಾಂಗ್ರೆಸ್‌ಗೆ ಅಧಿವೇಶನದಲ್ಲೇ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಸಜ್ಜಾಗಿದೆ.
ಈ ನಡುವೆ ಜೆಡಿಎಸ್ ಸಹ ಆಡಳಿತ ಪಕ್ಷದ ವೈಫಲ್ಯ ಪ್ರಸ್ತಾಪಿಸಲು ಸಿದ್ಧತೆ ನಡೆಸಿದ್ದು ಬೆಂಗಳೂರು-ಮೈಸೂರು ಹೈವೇ ಅವಾಂತರ ವಿಚಾರ ಚರ್ಚೆಗೆ ಪಟ್ಟು ಹಿಡಿಯಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ 16 ವರ್ಷಗಳಲ್ಲಿ 11 ವರ್ಷ ಬಿಜೆಪಿಯೇ ಅಧಿಕಾರ ನಡೆಸಿದ್ದು, ಎಲ್ಲ ಕಾಲದ ಹಗರಣಗಳೂ ಸೇರಿಸಿ ತನಿಖೆ ನಡೆಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹೀಗಾಗಿ, ಅಧಿವೇಶನದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.