ಮಾನ, ಮರ್ಯಾದೆ ಇದ್ದರೆ ಎಚ್ಡಿಕೆ ರಾಜೀನಾಮೆ ನೀಡಲಿ
Team Udayavani, Jul 9, 2019, 3:00 AM IST
ಬೆಂಗಳೂರು: “ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾನ, ಮರ್ಯಾದೆ ಬಗ್ಗೆ ತುಂಬಾ ಮಾತನಾಡುತ್ತಿದ್ದರು. ಮೈತ್ರಿ ಪಕ್ಷಗಳ ಶಾಸಕ ಬಲ 103 ಇದ್ದರೆ, ಬಿಜೆಪಿ 107 ಶಾಸಕ ಬಲ ಹೊಂದಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ. ಮಂಗಳವಾರ ಸಂಜೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.