ಸಿದ್ದರಾಮಯ್ಯ ದಲಿತರ ಕ್ಷಮೆ ಕೇಳಲಿ: ಎನ್.ರವಿಕುಮಾರ್ ಆಗ್ರಹ
Team Udayavani, Nov 6, 2021, 9:15 PM IST
ಬೆಂಗಳೂರು: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದಿರುವ ಸಿದ್ದರಾಮಯ್ಯ ಅವರು ದಲಿತರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯವನ್ನು ಕಾಂಗ್ರೆಸ್ ತುತ್ಛವಾಗಿ ಕಂಡಿದೆ. ಆದರೆ, ಬಿಜೆಪಿ ಸರ್ಕಾರ ದಲಿತರಿಗೆ ಗರಿಷ್ಠ ಅವಕಾಶ ನೀಡಿದೆ ಎಂದು ಹೇಳಿದರು.
ದಲಿತರು ಮತ್ತು ಮುಸ್ಲಿಮರನ್ನು ಅಧಿಕಾರಕ್ಕಾಗಿ ಮಾತ್ರ ಇಟ್ಟುಕೊಂಡ ಪಕ್ಷ ಕಾಂಗ್ರೆಸ್. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಅವರನ್ನು ಮತಬ್ಯಾಂಕಾಗಿ ಮಾತ್ರ ಬಳಸಿಕೊಂಡಿತ್ತು. ಜಗಜೀವನರಾಂ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕಿತ್ತಾದರೂ ಕಡೆಗಣಿಸಲಾಯಿತು. ಡಾ. ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಿಲ್ಲ ಎಂದು ತಿಳಿಸಿದರು.
ದಲಿತರಿಗೆ ಅಕ್ಕಿ, ಪಡಿತರ ಚೀಟಿ, ಮೂಲ ವೇತನ, ಕುಡಿಯುವ ನೀರು, ಜಮೀನು, ಮನೆಗಳ ವಿತರಣೆ, ಜಮ್ಮು- ಕಾಶ್ಮೀರದಲ್ಲಿ ಮೀಸಲಾತಿ, ದಲಿತರ ಕಾಲೊನಿಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ, ದಲಿತರಿಗೆ ಉದ್ಯೋಗದಂಥ ಹತ್ತಾರು ಅಭಿವೃದ್ಧಿ ಕ್ರಮವನ್ನು ಬಿಜೆಪಿ ಕೈಗೊಂಡಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಿದ್ದರಾಮಯ್ಯ ಅವರು ಸಿಂದಗಿಯ ಮಾದಿಗ ಸಮಾವೇಶದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ ಎಂದರು. ಆದರೆ, ಈಗ ನಾನು ಆ ರೀತಿ ಹೇಳಿಲ್ಲ ಎನ್ನುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ತಕ್ಕುದಾಗಿ ನಡೆದುಕೊಳ್ಳುತ್ತಿಲ್ಲ. ಅವರು ಸಿದ್ದರಾಮಯ್ಯ ಅಲ್ಲ; ಅವರು ಸುಳ್ಳುರಾಮಯ್ಯ ಎಂದು ಟೀಕಿಸಿದರು.
ಮಲ್ಲಿಕಾರ್ಜುನ ಖರ್ಗೆ, ಡಾ. ಪರಮೇಶ್ವರ್, ಶ್ರೀನಿವಾಸ ಪ್ರಸಾದ್ ಸೇರಿದಂತೆ ಹಲವರಿಗೆ ತೊಂದರೆ ಕೊಟ್ಟ ಸಿದ್ದರಾಮಯ್ಯರಿಗೆ ಮುಂದಿನ ಚುನಾವಣೆಗಳಲ್ಲಿ ಜನರು ಪಾಠ ಕಲಿಸಲಿದ್ದಾರೆ ಎಂದರು. ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ ಮತ್ತು ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.