ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲಿ
Team Udayavani, Jul 23, 2019, 3:03 AM IST
ಬಾಗಲಕೋಟೆ: ರಾಜ್ಯದ ಪ್ರಸ್ತುತ ರಾಜಕೀಯ ಬಿಕ್ಕಟ್ಟಿನಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಲು ಹಕ್ಕಿದೆ ಎಂದು ವಿರೋಧ ಪಕ್ಷದವರು ಹೇಳಿದರೆ, ಆ ಹಕ್ಕಿಲ್ಲ ಎಂದು ಆಡಳಿತ ಪಕ್ಷದವರು ಹೇಳುತ್ತಿದ್ದಾರೆ. ಹೀಗಾಗಿ, ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಪ್ರಸ್ತುತ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಬೇಕು. ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಸುಮಾರು 20 ಜಿಲ್ಲೆಗಳಲ್ಲಿ ಕುಡಿಯಲು ಹನಿ ನೀರು ಸಿಗದೆ ಜನರು ಪರದಾಡುತ್ತಿದ್ದಾರೆ. ಎಲ್ಲೆಡೆ ತೀವ್ರ ಬರ ತಲೆದೋರಿದೆ. ಆದರೆ, ಶಾಸಕರು ಲಕ್ಷಾಂತರ ರೂ.ಖರ್ಚು ಮಾಡಿ ರೆಸಾರ್ಟ್‌ನಲ್ಲಿದ್ದಾರೆ. ಅವರು ಖರ್ಚು ಮಾಡುತ್ತಿರುವುದು ಸ್ವಂತ ದುಡ್ಡಲ್ಲ. ರಾಜ್ಯದ ಜನರು ಕಟ್ಟಿದ ತೆರಿಗೆ ದುಡ್ಡು. ರೆಸಾರ್ಟ್‌ಗೆ ಹೋದವರಿಗೆ ಮಾನ-ಮರ್ಯಾದೆ ಇಲ್ಲ.
ಅಂಥವರನ್ನು ಪೋಷಣೆ ಮಾಡುತ್ತಿರುವವರು ರಾಜಕೀಯದಲ್ಲಿರಲು ಅಯೋಗ್ಯರು. ಈಗಿನ ರಾಜಕೀಯ ಜನರಿಗೆ ಅಸಹ್ಯ ಹುಟ್ಟಿಸುತ್ತಿದೆ. ರಾಜಕೀಯ ವರ್ಚಸ್ಸನ್ನೇ ಹಾಳು ಮಾಡುತ್ತಿದೆ. ವಿಧಾನಸಭೆಯಲ್ಲಿನ ಎಲ್ಲಾ ಪಕ್ಷಗಳ ನಾಟಕಗಳು ಅಸಹ್ಯಕರವಾಗಿವೆ. ಇಂತಹ ಕೆಟ್ಟ ಪರಿಸ್ಥಿತಿ ಜನಸಾಮಾನ್ಯರಿಗೆ ಬೇಕಾಗಿಲ್ಲ. ರಾಜ್ಯದ ಮತದಾರರು ಇಂಥವರಿಗೆ ಪಾಠ ಕಲಿಸಲು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.