ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಪೋಷಕರಲ್ಲಿ ಸುಧಾಕರ್ ಮನವಿ
Team Udayavani, Jan 1, 2021, 10:05 AM IST
ಬೆಂಗಳೂರು: ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ಇದು ನನ್ನ ಕಿವಿಮಾತು ಎಂದು ಸುಧಾಕರ್ ತಿಳಿಸಿದ್ದಾರೆ.
SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ.
ಇದನ್ನೂ ಓದಿ: ಇಂದಿನಿಂದ ಶಾಲಾ-ಕಾಲೇಜು ಆರಂಭ: ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ಗುರುಗಳು
ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ ಎಂದು ಇದೇ ವೇಳೆ ಮನವಿ ಮಾಡಿದರು.
ಇದನ್ನೂ ಓದಿ: ಹೊಸ ವರ್ಷದ ಸಂಭ್ರಮ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.