ಸಂವಿಧಾನದ ಆಶಯ ಅನುಷ್ಠಾನಗೊಳ್ಳಲಿ
Team Udayavani, Nov 27, 2019, 3:06 AM IST
ಬೆಂಗಳೂರು: ವಿಶ್ವದಲ್ಲಿಯೇ ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ಹೆಮ್ಮೆ ಪಡುವಂತಹದ್ದಾಗಿದ್ದು ಸಂವಿಧಾನದ ಮೂಲ ಆಶಯಗಳು ಅನುಷ್ಠಾನ ಗೊಳ್ಳಬೇಕಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸಂವಿಧಾನ ದಿನಾಚರಣೆ ಪ್ರಯುಕ್ತ ಮಾತನಾಡಿ, ಭಾರತದ ಜನರ ಭಾವನೆಗೆ ಸಂವಿಧಾನದಲ್ಲಿ ಅಕ್ಷರ ರೂಪ ಕೊಡಲಾಗಿದೆ. ಸಂವಿಧಾನದ ಮೂಲ ಆಶಯ ಅನುಷ್ಠಾನಗೊಂಡು ಜನರ ಭಾವನೆಗಳಿಗೆ ಬೆಲೆ ದೊರೆಯುವಂತಾಗಬೇಕು. ಅಲ್ಲದೇ, ನಾವು ಬ್ರಿಟಿಷರ ಗುಲಾಮಗಿರಿಯಿಂದ ದೂರ ಆಗಿದ್ದೇವೆಯಾದರೂ ಇನ್ನೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಹೇಳಿದರು.
ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ನೀಡಲಾಗಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ, ಸಾಮಾನ್ಯ ಜನರು ನ್ಯಾಯ ಪಡೆಯುವುದರಿಂದ ವಂಚಿತರಾಗು ತ್ತಾರೆ. ಹೀಗಾಗಿ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿ ನಡೆದುಕೊಂಡು ಹೋಗ ಬೇಕೆಂದರೆ, ಸಂವಿಧಾನದ ಮೂರು ಅಂಗಗಳ ನಡುವೆ ಸಮನ್ವಯ ಇರಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ನ.26 ರಂದು ಸಂವಿಧಾನ ದಿವಸ್ ಆಚರಣೆ ಮಾಡಬೇಕೆಂದು ಸೂಚಿಸಿದಾಗ, ರಾಜ್ಯ ಸರ್ಕಾರದ ಮೂಲಕವೇ ಎಲ್ಲ ಶಾಲಾ ಕಾಲೇಜುಗಳಲ್ಲಿ ಆಚರಿಸಲು ನಿರ್ಧರಿಸಲಾಯಿತು. ಯುವಕರಿಗೆ ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್, ದೇಶದ ಸಂವಿಧಾನ ಎಲ್ಲಾ ಕಾನೂನುಗಳ ತಾಯಿ. ವಿವಿಧ ರಾಷ್ಟ್ರಗಳ ಕಾನೂನು ಅಧ್ಯಯನ ಮಾಡಿ ಸಂವಿಧಾನದ ರಚನೆ ಮಾಡಿದ್ದೇವೆ. ನೂರಕ್ಕೂ ಹೆಚ್ಚು ತಿದ್ದುಪಡಿಯಾಗಿದ್ದರೂ ಮೂಲ ಆಶಯಕ್ಕೆ ಧಕ್ಕೆಯಾಗಿಲ್ಲ ಎಂದು ಹೇಳಿದರು.
ಸಂವಿಧಾನ ಎಷ್ಟೇ ಒಳ್ಳೆಯದಿದ್ದರೂ ಅದನ್ನು ಆಚರಣೆಗೆ ತರುವವರು ಕೆಟ್ಟವರಾಗಿದ್ದರೆ ಯಾವುದೇ ಆಶಯ ಈಡೇರಲ್ಲ. ಹೀಗಾಗಿ ಸಂವಿಧಾನದ ಆಶಯವನ್ನು ಮುಂದೆ ಹೇಗೆ ನಡೆಸಿಕೊಂಡು ಹೋಗುತ್ತೇವೆ ಎನ್ನುವುದು ಮುಖ್ಯವೆಂದರು. ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.