ರಾಜ್ಯ ಸರ್ಕಾರವೇ ರಾಷ್ಟ್ರೀಕೃತ ಬ್ಯಾಂಕ್‌ಸಾಲ ಮನ್ನಾ ಮಾಡಲಿ
Team Udayavani, Aug 15, 2017, 11:01 AM IST
ಬೆಂಗಳೂರು: “ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಬೇಕು’ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಜಲ ವಿವಾದಗಳ ಕುರಿತು ನಡೆದ ಸರ್ವ ಪಕ್ಷ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನೂ ಮನ್ನಾ ಮಾಡಿವೆ. ಅದೇ ರೀತಿ ರಾಜ್ಯ ಸರ್ಕಾರವೂ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕು’ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ದೊರೆಯುತ್ತಿದ್ದ ಅನುದಾನದಲ್ಲಿ ಶೇ.10 ರಷ್ಟು ಹೆಚ್ಚಳ ಮಾಡಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ
ಮೊದಲು ಶೇ.32ರಷ್ಟು ಕೇಂದ್ರದ ಅನುದಾನ ಬರುತ್ತಿತ್ತು. ಈಗ ಶೇ.42ಕ್ಕೆ ಹೆಚ್ಚಳವಾಗಿದೆ ಎಂದು ಹೇಳಿದರು.
ಸಿಎಂ ತಿರುಗೇಟು: ಸದಾನಂದಗೌಡರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಹಿಂದೆ ಮನಮೋಹನ್ ಸಿಂಗ್ ಸರ್ಕಾರ 72 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದಾಗ ಇದೇ ರೀತಿ ಮಾತನಾಡಬೇಕಿತ್ತು. ವಿ.ಪಿ. ಸಿಂಗ್ ಸರ್ಕಾರವೂ ರೈತರ ಸಾಲಮನ್ನಾ ಮಾಡಿತ್ತು. ಆಗ
ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲು ಬರುವುದಿಲ್ಲ ಎನ್ನುತ್ತಾರೆ. ನಾವು ನಮ್ಮ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡಲೇಬೇಕು ಎಂದು ಆಗ್ರಹಿಸಿದರು.
ಅಮಿತ್ ಶಾಗೆ ನೈತಿಕತೆ ಇಲ್ಲ
“ರಾಜ್ಯ ಸರ್ಕಾರದ ಬಗ್ಗೆ ಆರೋಪ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ನೈತಿಕತೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೇ ಜನಪರ ಆಡಳಿತ ನಡೆಸಿಕೊಂಡು ಬಂದಿದೆ. ಅವರು ಭ್ರಷ್ಟಾಚಾರಿಗಳ ಜತೆ ಕುಳಿತು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.