ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್
Team Udayavani, Aug 14, 2022, 8:47 PM IST
ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ ನಾವು-ನೀವು ಬೆಳೆದಿದ್ದೇವೆ. ಆದರೂ, ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು ಇದು ಅಕ್ಷಮ್ಯ. ನೀವು ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು 1,837 ಮಂದಿಗೆ ಕೋವಿಡ್ ಪಾಸಿಟಿವ್; ಮೂವರು ಸಾವು
ಮಹಾತ್ಮ ಗಾಂಧೀ ಅವರ ನೇತೃತ್ವದಲ್ಲಿ ನೆಹರೂ ಅವರು ಅಸಕಾರ ಚಳುವಳಿ, ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಪ್ರತಿ ಹಂತದಲ್ಲೂ ತಮ್ಮ ಬದುಕು ಮುಡಿಪಿಟ್ಟವರು. ಅಲ್ಲದೆ ಸ್ವಾತಂತ್ರ್ಯ ಹೋರಾಟಕ್ಕಾಗಿ 9 ವರ್ಷ ಸೆರೆವಾಸ ಅನುಭವಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.