ಮುಂಬರುವ ಬಜೆಟ್ ರೈತಪರವಾಗಿರಲಿ
Team Udayavani, Jan 22, 2020, 3:00 AM IST
ಬೆಂಗಳೂರು: ಈ ಬಾರಿಯ ಬಜೆಟ್ ರೈತಪರವಾಗಿರಬೇಕು ಎಂದು ರಾಜ್ಯ ರೈತ ಸಂಘ-ಹಸಿರು ಸೇನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘ-ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಪುಟ್ಟಯ್ಯ, ರೈತ ಮುಖಂಡ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಹುಟ್ಟು ಹಬ್ಬದ ದಿನವಾದ ಫೆ.13 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಲಿದ್ದಾರೆ. ಆ ವೇಳೆ ರೈತ ಪರ ಬಜೆಟ್ ಮಂಡನೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಸಮಸೆಗೆ ಕಿವಿಗೊಡುತ್ತಿಲ್ಲ. ಅತ್ತ ರೈತರಿಗೆ ಸಾಲ ನೀಡಿರುವ ಸಹಕಾರ ಸಂಘಗಳು ಕಿರುಕಳು ನೀಡುವುದರಲ್ಲಿವೆ. ಕೆಲವು ಕಡೆ ರೈತರ ಆಸ್ತಿ ಹರಾಜಿಗೂ ಮುಂದಾಗಿವೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀರಾವರಿ, ಗ್ರಾಮೀಣ ಅಭಿವೃದ್ಧಿ, ತೋಟ ಗಾರಿಕೆ,ರೇಷ್ಮೆ, ಹೈನುಗಾರಿಕೆ, ಕುಕ್ಕುಟೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು. ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು. ಒಂದು ವೇಳೆ ಸರ್ಕಾರ ರೈತರಪರ ಬಜೆಟ್‌ಗೆ ಮುಂದಾಗದಿದ್ದರೆ ಮಾ.2ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಲಕ್ಷಾಂತರ ರೈತರು ಬೆಂಗಳೂರು ರೈಲ್ವೇ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಬೃಹತ್ ಮೆರವಣಿಗೆ ನಡೆಸಿ ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.