“ಗ್ರಾಮವಾಸ್ತವ್ಯ ಒಮ್ಮೆ ತಿರುಗಿ ನೋಡಲಿ’
Team Udayavani, Jun 4, 2019, 3:06 AM IST
ಉಡುಪಿ: “ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ ಎಂಬುದನ್ನು ತಿರುಗಿ ನೋಡಲಿ’ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಮೊದಲು ಹೊಟೇಲ್ ಕೊಠಡಿ ವಾಸ್ತವ್ಯ ಬಿಟ್ಟು ವಿಧಾನಸೌಧದ ತಮ್ಮ ಕಚೇರಿಯಲ್ಲಿದ್ದು ಕೆಲಸ ಮಾಡಲಿ ಎಂದರು.
ಸಿದ್ದರಾಮಯ್ಯ ಆಟ: ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿಯಾಗಬೇಕೆಂದು ಶಾಸಕರನ್ನು ಎತ್ತಿಕಟ್ಟಿ ಗೊಂದಲ ಸೃಷ್ಟಿಸಿ ಆಟ ಆಡುತ್ತಿದ್ದಾರೆ. ಒಂದು ವೇಳೆ ಸರಕಾರಕ್ಕೆ ನೈತಿಕತೆ ಇದ್ದಿದ್ದರೆ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಕೂಡಲೇ ರಾಜೀನಾಮೆ ನೀಡಬೇಕಿತ್ತು. ಒಟ್ಟಾರೆ ಸ್ವಾರ್ಥ ರಾಜಕೀಯದಿಂದ ಜನತೆ ತೊಂದರೆಗೀಡಾಗಿದ್ದಾರೆ ಎಂದರು.
ಸರಕಾರ ಕನ್ನಡಕ್ಕೆ ಆದ್ಯತೆ ನೀಡಲಿ: ತ್ರಿಭಾಷಾ ಶಿಕ್ಷಣದ ಕುರಿತು ಪ್ರಶ್ನಿಸಿದಾಗ ರಾಜ್ಯ ಸರಕಾರ ಮೊದಲು ಕನ್ನಡ ಭಾಷೆಯ ಅಭಿವೃದ್ಧಿಗೆ ಬೇಕಾದ ಬೆಂಬಲ ನೀಡಲಿ. ಕನ್ನಡ ಮಾತನಾಡುವುದನ್ನು ಕಡ್ಡಾಯ ಮಾಡಲಿ. ಕನ್ನಡ ಶಾಲೆಗಳಿಗೆ ಉತ್ತಮ ಶಿಕ್ಷಕರು ಸೇರಿ ಅಗತ್ಯ ಸೌಕರ್ಯ ನೀಡಿ ಗುಣಮಟ್ಟದ ಶಿಕ್ಷಣಕ್ಕೆ ಒದಗಿಸಲಿ. ಅನ್ಯ ಭಾಷೆಗಳನ್ನೂ ಕಲಿಯಬೇಕು.
ತ್ರಿಭಾಷಾ ಶಿಕ್ಷಣದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕನ್ನಡದ ಕೆಲಸಗಳಿಗೆ ಮೀಸಲಿಟ್ಟ ಹಣವನ್ನು ಅಮೆರಿಕಕ್ಕೆ ಪ್ರವಾಸ ಹೋಗಲು ವೆಚ್ಚ ಮಾಡಿದ್ದರು ಎಂದು ಶೋಭಾ ತಿಳಿಸಿದರು.
ಸುಮಲತಾ ಬೆಂಬಲ ಅಪೇಕ್ಷೆ: ಸುಮಲತಾ ಬೆಂಬಲ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂಬ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿದೆ. ಹಾಗಾಗಿ ಈಗ ಅವರ ಬೆಂಬಲ ಬಿಜೆಪಿಗೆ ಇರುತ್ತದೆ ಎಂಬುದು ನಮ್ಮ ಅಪೇಕ್ಷೆ ಎಂದರು.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದು ಜನರು ಗುಳೆ ಹೊರಟಿದ್ದಾರೆ. ಜಾನುವಾರುಗಳು ಮೇವಿಲ್ಲದೆ ಅಸು ನೀಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯವು ಪಲಾಯನ ಸೂತ್ರದಂತೆ ಕಾಣುತ್ತಿದ್ದು, ಹಾಸ್ಯಾಸ್ಪದವೆನಿಸಿದೆ.
-ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ
ಕುಮಾರಸ್ವಾಮಿ ನುಡಿದಂತೆ ನಡೆಯಲ್ಲ. ಹಿಂದೆ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಉತ್ತರ ಕರ್ನಾಟಕದಲ್ಲೇ ಇರುತ್ತೇನೆ ಎಂದಿದ್ದರು. ಅದರಂತೆ ನಡೆದುಕೊಳ್ಳಲಿಲ್ಲ. ಈಗ ಪುನಃ ಗ್ರಾಮ ವಾಸ್ತವ್ಯ ಮಾಡುವುದಾಗಿ ಹೇಳುತ್ತಿದ್ದಾರೆ. ಹಿಂದೆ ವಾಸ್ತವ್ಯ ಮಾಡಿದ್ದ ಮನೆಗಳನ್ನು ತಿರುಗಿಯೂ ನೋಡಿಲ್ಲ. ಅವರ ಗ್ರಾಮ ವಾಸ್ತವ್ಯದಿಂದ ಯಾರಿಗೆ ಲಾಭವಾಗಿದೆ?
-ಮುರಗೇಶ ನಿರಾಣಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.