ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Nov 29, 2021, 1:03 PM IST
ಬೆಂಗಳೂರು: ಬೆಳೆ ಹಾನಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತುಮಕೂರು, ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ ಒಂದು ತಂಡವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯೂ ನಡೆದಿದೆ ಎಂದರು.
ಇದನ್ನೂ ಓದಿ:ಅನಿಲ್ ಲಾಡ್ ರನ್ನು ಬಂಧಿಸಬೇಕು,ಕಾಂಗ್ರೆಸ್ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ
ಬೆಳೆ ಹಾನಿಗೆ 685 ಕೋಟಿ ರೂ.ಗಳು ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆಪ್ ನಲಿ ಮಾಹಿತಿ ಆಪ್ ಲೋಡ್ ಮಾಡಿದವರಿಗೆ ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದು ಅವರು ನುಡಿದರು.
ಕೋವಿಡ್ ನಿಯಂತ್ರಣಕ್ಕೆ ಕಟ್ಟೆಚ್ಚರ: ಕೋವಿಡ್ 19 ಅಲ್ಲಲ್ಲಿ ಸಾಂಕ್ರಾಮಿಕ ಕ್ಲಸ್ಟರ್ ನಲ್ಲಿ ಕಂಡುಬರುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಕಂಟೇನ್ಮೆಂಟ್ ವಲಯಗಳನ್ನು ಮಾಡಿ, ಸಂಪರ್ಕಿತರ ಪರೀಕ್ಷೆ, ಕ್ವಾರಂಟೈನ್ ಮಾಡಲಾಗಿದೆ. ಕೆಲವು ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಬರುವ ಪ್ರತಿಯೊಬ್ಬರನ್ನು ಪರೀಕ್ಷಿಸಲಾಗುತ್ತಿದ್ದು, ನೆಗೆಟಿವ್ ವರದಿ ಬಂದ ನಂತರವೇ ನಗರ ಪ್ರವೇಶಕ್ಕೆ ಅವಕಾಶ ನೀಡಲು ಸೂಚನೆ ನೀಡಲಾಗಿದೆ. ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರ ಮೇಲೆಯೂ ದೊಡ್ಡ ಪ್ರಮಾಣದಲ್ಲಿ ನಿಗಾ ಇರಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕೇರಳದ ವಿದ್ಯಾರ್ಥಿಗಳು, ನರ್ಸಿಂಗ್ ಸಿಬ್ಬಂದಿಗಳ ಬಗ್ಗೆಯೂ ನಿಗಾ ವಹಿಸಲಾಗುತ್ತಿದೇ ಎಂದರು.
ಹೊಸ ತಳಿಯ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ನಿರ್ದೇಶನಗಳಂತೆ ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಶಾಲಾ ಕಾಲೇಜುಗಳ ಮೇಲೆಯೂ ನಿಗಾ ವಹಿಸಿದ್ದು, ಎಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ ಅಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.