ಎನ್‌ಸಿಆರ್‌ಟಿ ಪಠ್ಯಕ್ರಮ ಬೇಡವೆಂದು ಸಿಎಂಗೆ ಪತ್ರ
Team Udayavani, Oct 5, 2017, 9:39 AM IST
ಬೆಂಗಳೂರು: ಆರನೇ ತರಗತಿಯಿಂದಲೇ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್(ಎನ್‌ಸಿಇಆರ್‌ಟಿ) ಪಠ್ಯಕ್ರಮ ಅಳವಡಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ರಾಜ್ಯಪಠ್ಯಕ್ರಮದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಸುವ ನಿರ್ಧಾರವನ್ನು ಕೈಬಿಡುವಂತೆ ಸಚಿವ ತನ್ವೀರ್ ಸೇs… ಅವರಿಗೆ ಬರಗೂರು ರಾಮಚಂದ್ರಪ್ಪ ಪತ್ರ ಬರೆದಿದ್ದರು. ಇದಕ್ಕೆ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಈ ಕ್ರಮದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ. ಕೇಂದ್ರೀಯ ಪಠ್ಯಕ್ರಮದಿಂದ ರಾಜ್ಯದ ಶೈಕ್ಷಣಿಕ ಸ್ವಾಯತ್ತತೆ ಹಾಗೂ ಹಕ್ಕಿಗೆ ಧಕ್ಕೆ ಬರಲಿದೆ. ರಾಜ್ಯದ ಪಠ್ಯಕ್ರಮ ಸರಿ ಇಲ್ಲ ಎಂದು ಸರ್ಕಾರವೇ ಸ್ವಯಂ ಆಗಿ ಒಪ್ಪಿಕೊಂಡಂತಾಗುತ್ತದೆ. ಜತೆಗೆ ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಕಠಿಣವಾಗಲಿದೆ. ಹೀಗಾಗಿ ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ಏಕಪಕ್ಷೀಯ ತೀರ್ಮಾನವನ್ನು ಹಿಂದಕ್ಕೆ ಪಡೆಯುವಂತೆ ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಈ ಕುರಿತಂತೆ ಶಿಕ್ಷಣ ಸಚಿವರಲ್ಲಿ ನಿಮ್ಮೊಂದಿಗೆ ಸಮಾಲೋಚಿಸಲು ತಿಳಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು
ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.