ಮಹಾರಾಷ್ಟ್ರ, ತೆಲಂಗಾಣ ಸಿಎಂಗೆ ಪತ್ರ
Team Udayavani, Aug 6, 2019, 3:00 AM IST
ಬೆಂಗಳೂರು: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಮಾಹಿತಿ ನೀಡದೆ ಭಾರೀ ಪ್ರಮಾಣದಲ್ಲಿ ನೀರನ್ನು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ಸಾಕಷ್ಟು ಸಮಸ್ಯೆಗಳಾಗಿದ್ದು, ಈ ಬಗ್ಗೆ ರಾಜ್ಯದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನಿಯಮಿತವಾಗಿ ನೀರು ಹರಿಸುವತ್ತ ಗಮನ ಹರಿಸುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿದ್ದಾರೆ.
ಜತೆಗೆ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿಸುತ್ತಿರುವುದರಿಂದ ರಾಜ್ಯದ ಕೆಲ ಜಲಾಶಯ ಭರ್ತಿಯಾಗಿದ್ದು, ಹೊರ ಹರಿವಿನ ಪ್ರಮಾಣ ಹೆಚ್ಚಾಗಲಿದೆ. ಆ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರಿಗೆ ಪತ್ರ ಬರೆದಿದ್ದಾರೆ.
ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ, ಮಹಾರಾಷ್ಟ್ರ ಸರ್ಕಾರವು ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿ ಹಾಗೂ ಉಪನದಿಗಳಿಗೆ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಬಿಡುತ್ತಿದೆ. ಕೋಯ್ನಾ ಜಲಾಶಯದಿಂದ ಆರಂಭದಲ್ಲಿ 20,000ದಿಂದ 50000 ಕ್ಯುಸೆಕ್ ನೀರು ಹರಿಬಿಡಲಾಗುತ್ತಿತ್ತು. ಬಳಿಕ 50,000ದಿಂದ 80,000 ಕ್ಯುಸೆಕ್ ಹಾಗೂ ಎರಡು ದಿನಗಳಲ್ಲಿ 1.25 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗಿದೆ.
ಇದರಿಂದಾಗಿ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ರಾಯಚೂರು, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಾಕಷ್ಟು ಹಾನಿಯಾಗಿದ್ದು, ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಭಾರೀ ಪ್ರಮಾನದಲ್ಲಿ ಕೃಷ್ಣಾ ನದಿಗೆ ನೀರು ಹರಿಸುತ್ತಿರುವುದರಿಂದ ಈ ಜಿಲ್ಲೆಗಳಲ್ಲಿ ಜನ- ಜಾನುವಾರುಗಳಿಗೆ ಹಾನಿಯಾಗಿದೆ.
ಹಾಗಾಗಿ ಜಲಾಶಯದಿಂದ ನೀರು ಹರಿಸುವ ಪ್ರಮಾಣವನ್ನು ಸಮರ್ಪಕವಾಗಿ ಮೇಲ್ವಿಚಾರಣೆ ನಡೆಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಬೇಕು. ಏಕಾಏಕಿ ಭಾರಿ ಪ್ರಮಾಣದಲ್ಲಿ ನೀರು ಹರಿಸುವ ಬದಲಿಗೆ ಹಂತ ಹಂತವಾಗಿ ನಿಯಮಿತವಾಗಿ ಹೊರ ಹರಿವಿನ ಪ್ರಮಾಣ ಹೆಚ್ಚಿಸುವಂತೆ ಸೂಚಿಸಬೇಕು. ಹೊರ ಹರಿವಿನ ಬಗ್ಗೆ ಕರ್ನಾಟಕದ ಅಧಿಕಾರಿಗಳಿಗೆ ಮುಂಚಿತವಾಗಿಯೇ ನಿಯಮತಿವಾಗಿ ಮಾಹಿತಿ ನಿಯಮಿತವಾಗಿ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.