ಟೈಲರ್‌ಗಳಿಗೆ ಜೀವನ ಭದ್ರತೆ- ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹ
Team Udayavani, Dec 5, 2023, 11:05 PM IST
ಬೆಳಗಾವಿ: ಅಸಂಘಟಿತ ವಲಯದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಸುಮಾರು 10 ಲಕ್ಷ ಮಂದಿ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6,000 ಮಂದಿ ಟೈಲರ್ ವೃತ್ತಿ ನಿರತರಾಗಿದ್ದು, ಅವರಿಗೆ ಜೀವನ ಭದ್ರತೆ ತೀರಾ ಆವಶ್ಯಕವಾಗಿದೆ. ಅವರಿಗೆ ಸಾಮಾಜಿಕ ಭದ್ರತೆಯಿಲ್ಲ, ಅವರಿಗಾಗಿ ಟೈಲರ್ ಕ್ಷೇಮನಿಧಿ ಮಂಡಳಿಯನ್ನು ರಚಿಸಿ, ಆ ಮೂಲಕ ಭವಿಷ್ಯ ನಿಧಿ ಹಾಗೂ ಮಾಸಿಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮತ್ತು ಕುಟುಂಬ ಆರೋಗ್ಯ ವಿಮಾ ಯೋಜನೆಯನ್ನು ಒದಗಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಸದನದ ಗಮನ ಸೆಳೆದರು.
ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಈಗಾಗಲೇ ಸಮರ್ಪಕ ಲಿಖೀತ ಉತ್ತರವನ್ನು ನೀಡಲಾಗಿದೆ. ರಾಜ್ಯದಲ್ಲಿರುವ 43 ಅಸಂಘಟಿತ ವಲಯ ಕಾರ್ಮಿಕ ವಲಯದೊಳಗೆ ಟೈಲರ್‌ಗಳನ್ನೂ ಸೇರ್ಪಡೆಗೊಳಿಸಲಾಗಿದೆ. ಶಾಸಕರ ಪ್ರಶ್ನೆಯಂತೆ ಅವರಿಗೆ ನೇರವಾಗಿ ಭವಿಷ್ಯ ನಿಧಿ ಪಿಂಚಣಿ ನೀಡಲು ಬರುವುದಿಲ್ಲ. ಮುಂಬರುವ ದಿನಗಳಲ್ಲಿ ಸರಕಾರ ಕೈಗೊಳ್ಳುವ ಸಾಮಾಜಿಕ ಭದ್ರತಾ ಯೋಜನೆಯಡಿ ಟೈಲರ್‌ಗಳಿಗೆ ಕ್ಷೇಮ ನಿಧಿ ನೀಡಲು ಕ್ರಮ ವಹಿಸಲಾಗುವುದು. ಪತ್ರಿಕಾ ವಿತರಕರಿಗೂ ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.