ಚಿತ್ರದುರ್ಗದ ಮುರುಘಾ ಶರಣರಿಗೆ ಜೀವ ಬೆದರಿಕೆ?
Team Udayavani, Mar 21, 2017, 11:43 AM IST
ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆದರೆ, ಮಠದ ಮೂಲಗಳು ಇತನ್ನು ನಿರಾಕರಿಸಿದ್ದು, ಅಂತಹ ಯಾವುದೇ ಘಟನೆ ಸಂಭವಿಸಿಲ್ಲವೆಂದು ತಿಳಿಸಿವೆ. ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಮುರುಘಾಮಠಕ್ಕೆ ತೆರಳಿ ಮುರುಘಾ ಶರಣರೊಂದಿಗೆ ಚರ್ಚಿಸಿದರು. ಬೆದರಿಕೆ ಹಾಕಿದವನ ಮೊಬೈಲ್ ಸಂಖ್ಯೆ ಮತ್ತಿತರ ಮಾಹಿತಿ ಪಡೆದರು ಎಂದು ಹೇಳಲಾಗುತ್ತಿದೆ. ಈ ಕುರಿತು ಎಸ್ಪಿ ಅವರನ್ನು ಸಂಪರ್ಕಿಸಿದಾಗ, ನಮಗೆ ಅಂತಹ ಯಾವುದೇ ದೂರು ಬಂದಿಲ್ಲ. ನಾನು ಮುರುಘಾ ಶರಣರನ್ನು ಬಹಳ ದಿನಗಳಿಂದ ಭೇಟಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರನ್ನು ಭೇಟಿ ಮಾಡಿದ್ದು ನಿಜ. ವೈಯಕ್ತಿಕವಾಗಿ ಭೇಟಿ ಮಾಡಿ ಮಾತನಾಡಿಸಿರುವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಠದ ಸ್ಪಷ್ಟನೆ: ಮುರುಘಾ ಶರಣರಿಗೆ ಕೊಲೆ ಬೆದರಿಕೆಗೆ ಸಂಬಂಧಿಸಿದಂತೆ ಮುರುಘಾ ಮಠದಿಂದ ಸ್ಪಷ್ಟನೆ ನೀಡಲಾಗಿದೆ. ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವ್ಯಕ್ತಿಯೊಬ್ಬ ಮುರುಘಾ ಶರಣರ ದೂರವಾಣಿಗೆ ಕರೆ ಮಾಡಿ, ನೀವು ಪರಿವರ್ತನಾ ಪರವಾದಿಗಳು ಎಂದು ಹೇಳಿಕೊಂಡು ಕೆಳ ಮತ್ತು ಮೇಲ್ವರ್ಗಗಳ ನಡುವೆ ಸಾಮಾಜಿಕ ಸಂಘರ್ಷ ತರುತ್ತಿದ್ದೀರಿ ಎಂದು ದೂಷಣೆ ಮಾಡುತ್ತ ಬೆದರಿಕೆ ಹಾಕಿದ ಕಾರಣ ಸದರಿ ವಿಷಯವನ್ನು ತನಿಖೆಗಾಗಿ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಶ್ರೀಮಠವು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.