ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿ ಸಾಧ್ಯತೆ : ಸಚಿವ ಅಶೋಕ
Team Udayavani, Aug 13, 2021, 7:11 PM IST
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದ್ದಾರೆ.
ಇಂದು ( ಆ.14) ಮಾಧ್ಯಮಗಳ ಎದುರು ಮಾತನಾಡಿರುವ ಸಚಿವರು, ಬಹುಶಃ ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದರು.
Karnataka Chief Minister to hold a meeting with experts on Saturday in Bengaluru regarding third wave #COVID19. Likely to impose more strict rules after August 15: State Revenue Minister, R Ashok (file pic) pic.twitter.com/5kXhnaele5
— ANI (@ANI) August 13, 2021
ಇನ್ನು ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಶಾಲೆಗಳು ಇದೆ 23 ರಂದು ಆರಂಭಿಸುವುದಾಗಿ ಸರ್ಕಾರ ಘೋಷಿಸಿದೆ. ಆದರೆ, ಕೋವಿಡ್ ಮೂರನೇ ಅಲೆಯ ಭೀತಿ ಶುರುವಾಗಿದೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಈಗಾಗಲೇ ಉಡುಪಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ‘ವಾತ್ಸಲ್ಯ’ ಯೋಜನೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಮಕ್ಕಳು ಎಲ್ಲಾ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬಹುದು. ಇದರಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಕೂಡಾ ಒಳಗೊಂಡಿದೆ. ಯೋಜನೆಯಲ್ಲಿ ಕೆಲಸ ಮಾಡುವ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ನಾವು ತರಬೇತಿ ನೀಡಿದ್ದೇವೆ ಮತ್ತು ಈ ವೈರಸ್‌ನಿಂದ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುತ್ತೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಮಕ್ಕಳ ಐಸಿಯು ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.