ಲಾಕ್‌ಡೌನ್: ಸ್ಥಳೀಯ ತೀರ್ಮಾನ?
ಜಿಲ್ಲಾಡಳಿತಗಳಿಗೆ ವಿಸ್ತರಣೆ ಅಥವಾ ತೆರವು ಅಧಿಕಾರ ನೀಡಲು ಚಿಂತನೆ
Team Udayavani, Jul 21, 2020, 7:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ನಿರ್ಧಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸಹಿತ ರಾಜ್ಯದ ಇತರ ಜಿಲ್ಲೆಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.
ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ತೀರ್ಮಾನಕ್ಕೆ ಬಿಡುವ ಬಗ್ಗೆ ಚಿಂತನೆ ಇದೆ.
ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಜತೆಗೆ ದ.ಕ., ಧಾರವಾಡ, ಬೀದರ್, ಯಾದಗಿರಿ, ಕಲಬುರಗಿ, ಬೆಳಗಾವಿ, ರಾಯಚೂರುಗಳಲ್ಲಿಯೂ ಲಾಕ್‌ಡೌನ್ ಜಾರಿಯಲ್ಲಿದೆ.
ಸೋಮವಾರ ನಡೆದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಲೋಪವಾಗದಂತೆ ಕ್ರಮ
ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೋವಿಡ್ 19 ನಿಯಂತ್ರಣ ನಿಟ್ಟಿನಲ್ಲಿ ತಪಾಸಣೆ, ತ್ವರಿತ ಪರೀಕ್ಷಾ ವರದಿ, ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ತಪಾಸಣೆ ಮತ್ತು ಪರೀಕ್ಷೆ ಪ್ರಮಾಣ ಹೆಚ್ಚಳ, ಸಿಎಂ ಸೂಚನೆ ನೀಡಿರುವಂತೆ ಆಯಾ ವಿಧಾನ ಸಭೆ ಕ್ಷೇತ್ರ ಮತ್ತು ವಾರ್ಡ್ ಮಟ್ಟದಲ್ಲೇ ಸೋಂಕುಪೀಡಿತರಿಗೆ ಚಿಕಿತ್ಸೆ ದೊರೆಯುವಂತೆ ಮಾಡುವುದು.
ಪರೀಕ್ಷೆ ಹೆಚ್ಚಳ, ಸೋಂಕು ಕಡಿಮೆ
ರಾಜ್ಯದಲ್ಲಿ ಸೋಮವಾರ ಹಿಂದೆಂದಿಗಿಂತಲೂ ಅತೀ ಹೆಚ್ಚು 36,473 ಜನರನ್ನು ಕೋವಿಡ್ 19 ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೊಂದೆಡೆ ಕಳೆದ ಎರಡು ದಿನಗಳಲ್ಲಿ ನಾಲ್ಕು ಸಾವಿರದ ಗಡಿಯಲ್ಲಿದ್ದ ಸೋಂಕು ಪ್ರಕರಣಗಳು ಇಳಿಕೆಯಾಗಿದೆ.
3,648 ಮಂದಿಗೆ ಹೊಸದಾಗಿ ಸೋಂಕು ತಗಲಿದ್ದು, 72 ಸೋಂಕುಪೀಡಿತರು ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 67,420ಕ್ಕೆ, ಸಾವಿಗೀಡಾದವರ ಸಂಖ್ಯೆ 1,403ಕ್ಕೆ, ಗುಣಮುಖರಾದವರ ಸಂಖ್ಯೆ 23,795ಕ್ಕೆ ಏರಿದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು 1,452 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 31 ಮಂದಿ ಮೃತಪಟ್ಟಿದ್ದಾರೆ.
ಭರವಸೆ ಮೂಡಿಸಿದ ಆಕ್ಸ್‌ಫರ್ಡ್ ಲಸಿಕೆ
ಲಂಡನ್: ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯ ಸಂಶೋಧಿಸಿರುವ ಕೋವಿಡ್ 19 ಲಸಿಕೆಯ ಆರಂಭಿಕ ಎರಡು ಹಂತಗಳ ಪ್ರಯೋಗ ಫಲಿತಾಂಶಗಳು ಭರವಸೆ ಮೂಡಿಸಿವೆ. ಆಕ್ಸ್ ಫರ್ಡ್ ತಜ್ಞರು ಶೋಧಿಸಿದ ‘ಎಝೆಡ್‌ಡಿ1222’ ಲಸಿಕೆಯನ್ನು ಪಡೆದ ಹಲವರಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವುದೇ ಅಡ್ಡ ಪರಿಣಾಮ ಉಂಟು ಮಾಡದೆ ಲಸಿಕೆ ಸೋಂಕು ಪೀಡಿತನ ದೇಹದಲ್ಲಿ ಕೆಲಸ ಮಾಡಿದೆ. ಕೋವಿಡ್ 19 ವಿರುದ್ಧ ಪ್ರಬಲವಾಗಿ ಹೋರಾಡುವ ಟಿ- ಸೆಲ್ ರೋಗ ನಿರೋಧಕಗಳನ್ನು ಹೆಚ್ಚಿಸುವಲ್ಲಿ ಸಫಲವಾಗಿದೆ.
ಜಾಗತಿಕ ಸೋಂಕು ಪೀಡಿತರ ಸಂಖ್ಯೆ : 1,47,41,412
ಒಟ್ಟು ಸಾವು (ಜಗತ್ತು): 6,10,747
ಭಾರತ (ಸೋಂಕು): 11,52,355
ಚೇತರಿಕೆ : 7,24,494
ಸಾವು (ಭಾರತ) : 28,078
ಕರ್ನಾಟಕ (ಸೋಂಕು): 67,420
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.