ಲಾಕ್‌ಡೌನ್ ನಿಯಂತ್ರಣದಲ್ಲಿ: ಬೊಮ್ಮಾಯಿ
Team Udayavani, Jul 17, 2020, 7:05 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಜಾರಿಯಲ್ಲಿರುವ ಲಾಕ್‌ಡೌನ್ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಲಾಕ್‌ಡೌನ್ ಜಾರಿಯಲ್ಲಿರುವ ವ್ಯಾಪ್ತಿಯ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ದೂರವಾಣಿ ಮೂಲಕ ಚರ್ಚಿಸಿದ ಬಳಿಕ ಅವರು ಮಾಹಿತಿ ನೀಡಿದರು.
ಕೆಲವೆಡೆ ಲಾಕ್‌ಡೌನ್ ಉಲ್ಲಂಘಿಸಿ ವಾಹನ, ಜನರ ಅನಗತ್ಯ ಸಂಚಾರದ ಮಾಹಿತಿ ಇದ್ದು, ಮುಲಾಜಿಲ್ಲದೆ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದೇನೆ ಎಂದರು.
ನಾವು ಕೋವಿಡ್ 19 ಜತೆ ಹೋರಾಟ ಮಾಡಲೇಬೇಕು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಕೆಲವೊಂದು ಕಟ್ಟುನಿಟ್ಟಿನ ಕ್ರಮ ಪಾಲನೆ ಮಾಡಿದರೆ ಸಾಕು ಎಂದು ತಿಳಿಸಿದರು.
ಸಚಿವರಿಗೆ ಅವ್ಯವಸ್ಥೆ ದರ್ಶನ
ಕೋವಿಡ್ 19 ಉಸ್ತುವಾರಿ ಸಚಿವರಾದ ಡಿಸಿಎಂ ಡಾ| ಅಶ್ವತ್ಥನಾರಾಯಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಪ್ರತ್ಯೇಕವಾಗಿ ಕೋವಿಡ್ 19 ಕೇರ್ ಸೆಂಟರ್‌ಗಳ ಪರಿಸ್ಥಿತಿ ಅರಿಯಲು ತೆರಳಿದಾಗ ನಿಜ ದರ್ಶನವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಜಿಕೆವಿಕೆಯ ಕೋವಿಡ್ 19 ಕೇರ್ ಕೇಂದ್ರಕ್ಕೆ ಡಾ| ಅಶ್ವತ್ಥನಾರಾಯಣ ಭೇಟಿ ನೀಡಿದಾಗ ವೈದ್ಯರಿಲ್ಲದೆ, ರೋಗಿಗಳಿಗೆ ಸರಿಯಾಗಿ ಕುಡಿಯುವ ನೀರು, ಊಟದ ವ್ಯವಸ್ಥೆ ಇಲ್ಲದೆ ಪರದಾಡುವ ದೃಶ್ಯ ಕಂಡು ಬಂದಿದೆ.
ಡಾ| ಸುಧಾಕರ್ ಇಂದಿರಾ ನಗರದ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆಯ ದರ್ಶನ ಪಡೆದರು. ಈ ಸಂದರ್ಭ ಅಧೀಕ್ಷಕರು ಮತ್ತು ಸಿಬಂದಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.