ನಾಳೆ ರಾಜ್ಯವ್ಯಾಪಿ ಲೋಕ ಅದಾಲತ್
Team Udayavani, Jun 24, 2022, 6:32 AM IST
ಬೆಂಗಳೂರು: ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿ ರುವ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಜೂ. 25ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಿದ್ದು, ಸುಮಾರು ಐದು ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಿದೆ.
ಹೈಕೋರ್ಟ್‌ನ ಹಿರಿಯ ನ್ಯಾಯ ಮೂರ್ತಿಗಳು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾ| ಬಿ. ವೀರಪ್ಪ ಅವರು ಗುರುವಾರ “ಉದಯವಾಣಿ’ ಕಚೇರಿಗೆ ಭೇಟಿ ನೀಡಿದ್ದು, ಉದ್ದೇಶಿತ ಅದಾಲತನ್ನು ಸದ್ಬಳಕೆ ಮಾಡಿಕೊಳ್ಳಲು ಮನವಿ ಮಾಡಿದರು.
ಆಸ್ತಿ ಪಾಲು, ಅಪಘಾತ ಪರಿಹಾರ ಸಹಿತ ಕೆಲವು ಸಿವಿಲ್ ವ್ಯಾಜ್ಯಗಳಿಗೆ ಸೀಮಿತವಾಗಿದ್ದ ಲೋಕ ಅದಾಲತ್ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ಕೊಂಡಿದೆ. ಕೌಟುಂಬಿಕ ಕಲಹ, ವಿವಾಹ ವಿಚ್ಛೇದನ ಸಹಿತ ವಾಣಿಜ್ಯ ನ್ಯಾಯಾಲಯಗಳ ಭೂವ್ಯಾಜ್ಯಗಳು, ರಿಯಲ್ ಎಸ್ಟೇಟ್ ಪ್ರಾಧಿಕಾರ (ರೇರಾ) ಪ್ರಕರಣಗಳು, ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ಟ್ರಾಫಿಕ್ ದಂಡ, ಗ್ರಾಹಕರ ಪರಿಹಾರ ವೇದಿಕೆ, ಮಾಹಿತಿ ಹಕ್ಕು ಆಯೋಗದಡಿ ಬಾಕಿ ಇರುವ ಪ್ರಕರಣಗಳನ್ನು ಈಗ ಲೋಕ ಅದಾಲತ್‌ಗಳ ಮೂಲಕ ಇತ್ಯರ್ಥಪಡಿಸಲಾಗುತ್ತಿದೆ ಎಂದರು.
ಕೊರೊನಾ ಸಂದರ್ಭ ದೇಶದಲ್ಲೇ ಮೊದಲ ಬಾರಿಗೆ ಮೆಗಾ ಇ-ಲೋಕ ಅದಾಲತ್ ನಡೆಸಿದ ಖ್ಯಾತಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕಿದೆ. ಮೂರು ವರ್ಷಗಳಲ್ಲಿ ಲಕ್ಷಗಟ್ಟಲೆ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಸಾವಿರಾರು ಕುಟುಂಬಗಳ ಬದುಕಿ ನಲ್ಲಿ ನೆಮ್ಮದಿ ಮೂಡಿಸಿದ್ದಲ್ಲದೆ ಸರಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ಜಮೆ ಮಾಡಿದೆ. ನ್ಯಾಯಾಲಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ. ನ್ಯಾಯಾಂಗದ ಅಮೂಲ್ಯ ಸಮಯವನ್ನು ಉಳಿತಾಯ ಮಾಡಿದೆ ಎಂದು ಹೇಳಿದರು.
3 ವರ್ಷಗಳಲ್ಲಿ 20 ಲಕ್ಷ ಪ್ರಕರಣಗಳ ಇತ್ಯರ್ಥ :
2020ರಿಂದ 2022 ಮಾರ್ಚ್ ವರೆಗೆ ಮೂರು ವರ್ಷಗಳಲ್ಲಿ ನಡೆದ ಲೋಕ ಅದಾಲತ್‌ಗಳಲ್ಲಿ 20.24 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದರಿಂದ ಸಾವಿರ ಕೋಟಿಗೂ ಹೆಚ್ಚು ಹಣವನ್ನು ಪರೋಕ್ಷವಾಗಿ ಮತ್ತು ನೇರವಾಗಿ ಸರಕಾರದ ಬೊಕ್ಕಸಕ್ಕೆ ಜಮೆ ಮಾಡಲಾಗಿದೆ. ಇದಲ್ಲದೆ ಮೋಟಾರು ವಾಹನ ಕಾಯ್ದೆಯಡಿ, ಇತರ ಪ್ರಕರಣಗಳಲ್ಲಿ, ಆಸ್ತಿ ಪಾಲುದಾರಿಕೆ ಪ್ರಕರಣಗಳಲ್ಲಿ ನೊಂದವರಿಗೆ ಕೋಟ್ಯಂತರ ರೂಪಾಯಿ ಪರಿಹಾರ ದೊರಕಿಸಿಕೊಡಲಾಗಿದೆ ಎಂದರು.
ನ್ಯಾಯಾಯಲದ ಪ್ರಕರಣಗಳು ಹೊರತುಪಡಿಸಿ ಇತರ ಇಲಾಖೆ/ಪ್ರಾಧಿಕಾರಿಗಳಲ್ಲಿ 3 ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಯ 663 ಕೋಟಿ ಪ್ರಕರಣಗಳು ಬಾಕಿ ಇದ್ದು, ಸಾವಿರ ಕೋ.ರೂ.ಗೂ ಹೆಚ್ಚು ವಸೂಲಾತಿ ಬಾಕಿ ಇದೆ. ರಾಜ್ಯ ಗ್ರಾಹಕರ ಪರಿಹಾರ ವೇದಿಕೆಯ 14 ಸಾವಿರ ಪ್ರಕರಣಗಳು, ಮಾಹಿತಿ ಹಕ್ಕು ಕಾಯ್ದೆಯಡಿಯ 30,000 ಮತ್ತು ರೇರಾ ಅಡಿಯಲ್ಲಿ 3 ಸಾವಿರ ಪ್ರಕರಣಗಳು ಬಾಕಿ ಇದ್ದು, ಇವುಗಳನ್ನು ಕೂಡ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಯೋಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.