ಸೆಪ್ಟೆಂಬರ್, ಡಿಸೆಂಬರ್‌ನಲ್ಲಿ ಲೋಕ್ ಅದಾಲತ್
Team Udayavani, Jul 16, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ ಸೆಪ್ಟೆಂಬರ್ ಮತ್ತು ಡಿಸೆಂಬರ್ ತಿಂಗಳ ಎರಡನೇ ಶನಿವಾರದಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಎಲ್ಲ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ 2019ರ ಸೆಪ್ಟಂಬರ್ ಮತ್ತು ಡಿಸೆಂಬರ್ ತಿಂಗಳ 14ನೇ ದಿನಾಂಕದಂದು ಈ ಲೋಕ್ ಆದಾಲತ್ ನಡೆಯಲಿದೆ.
ಇದರಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಂಚಾಟೆ ಸಂಜೀವ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಕ್‌ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಸಿವಿಲ್ ವ್ಯಾಜ್ಯಗಳು, ಮೋಟಾರು ಅಪಘಾತ ಪರಿಹಾರ, ವೇತನ ಹಾಗೂ ಭತ್ಯೆ, ಭೂ ಸ್ವಾಧೀನ ಮುಂತಾದ ವ್ಯಾಜ್ಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.