Lok Sabha Election 2024 ಕಾಂಗ್ರೆಸ್ ಪಟ್ಟಿ: ಇನ್ನೂ 21 ಕ್ಷೇತ್ರಗಳು ಬಾಕಿ
ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶದಲ್ಲಿ ಹೈಕಮಾಂಡ್
Team Udayavani, Mar 9, 2024, 7:20 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸಹಿತ ಒಟ್ಟು 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ಈಗ ಕುತೂಹಲ ಮೂಡಿಸಿದೆ.
ಯಾವುದೇ ಗೊಂದಲಗಳಿಲ್ಲದ ಒಂದೇ ಹೆಸರಿರುವ ಕ್ಷೇತ್ರಗಳನ್ನು ಮಾತ್ರ ಅಂತಿಮಗೊಳಿಸಿರುವ ಕಾಂಗ್ರೆಸ್, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆಯಂತೂ ನೀಡಿದೆ. ಆದರೆ ಅಂತಿಮಗೊಳ್ಳದೆ ಉಳಿದಿರುವ 21 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಪ್ರತಿಷ್ಠಿತ ಕಣಗಳಿವೆ. ಕೆಲವೆಡೆ ಸಚಿವರನ್ನು ಅಗ್ನಿಪರೀಕ್ಷೆಗೆ ಗುರಿಪಡಿಸಲಿರುವ ಅಖಾಡಗಳೂ ಇವೆ. ಎದುರಾಳಿಗಳ ನಡೆಯನ್ನು ಕಾದುನೋಡುವ ತಂತ್ರವೂ ಹೈಕಮಾಂಡ್ ನಡೆಯ ಹಿಂದಿದೆ ಎನ್ನಲಾಗಿದೆ.
ಇದೆಲ್ಲಕ್ಕಿಂತ ಮುಖ್ಯವಾಗಿ ದಿಲ್ಲಿಯಲ್ಲಿ ನಡೆದ ಅಭ್ಯರ್ಥಿಗಳ ಈ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಆಯ್ಕೆ ಅಂತಿಮಗೊಂಡರೆ ರಾಜಕೀಯವಾಗಿ ಬೇರೆ ರೀತಿಯ ಸಂದೇಶ ರವಾನೆ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಜತೆಗೆ ಹಲವೆಡೆ ಪೈಪೋಟಿ ಇದ್ದು, ಎರಡಕ್ಕಿಂತ ಹೆಚ್ಚು ಹೆಸರು ರೇಸ್‌ನಲ್ಲಿವೆ. ಒಬ್ಬರ ಆಯ್ಕೆ ಮತ್ತೊಬ್ಬರ ಮನಸ್ತಾಪ ಅಥವಾ ಭಿನ್ನಮತಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದಲ್ಲದೆ, ಕೆಲವೆಡೆ ತಮ್ಮ ನಾಯಕರ ಸಂಬಂಧಿಕರನ್ನೂ ಕಣಕ್ಕಿಳಿಸುವ ಒತ್ತಡವೂ ನಡೆದಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶ ಇದೆ ಎಂದು ಮೂಲಗಳು ತಿಳಿಸಿವೆ.
ಮಾ. 11ರ ಬಳಿಕ ಮತ್ತೊಂದು ಪಟ್ಟಿ
ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮೊದಲ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾ. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಆ ಹೆಸರುಗಳು ಅಂತಿಮವಾಗಲಿವೆ ಎಂದು ಶುಕ್ರವಾರ ಡಿ.ಕೆ. ಶಿವಕುಮಾರ್ ಹೇಳಿದರು.
ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚಿಸಿದಾಗ ಅವರು ಯಾರ ಹೆಸರನ್ನು ಪ್ರಸ್ತಾವ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದಲ್ಲಿ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ ಎಂದರು.
17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದಿರಿ ಎಂದು ಕೇಳಿದಾಗ, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಾಹುಲ್ ಗಾಂಧಿ ಸಹಿತ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾವ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ, ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.