Lok Sabha Election; ಮೀಸಲು ಕ್ಷೇತ್ರಗಳ ಪ್ರಭುತ್ವಕ್ಕೆ ಕೈ, ಕಮಲ ಜಿದ್ದಾಜಿದ್ದಿ

2019ರ ಚುನಾವಣೆಯಲ್ಲಿ 7 ಕ್ಷೇತ್ರಗಳು ಬಿಜೆಪಿ ಪಾಲು ಈ ಬಾರಿ ಉಭಯ ಪಕ್ಷಗಳ ನಡುವೆ

Team Udayavani, Apr 4, 2024, 7:20 AM IST

Lok Sabha Election; ಮೀಸಲು ಕ್ಷೇತ್ರಗಳ ಪ್ರಭುತ್ವಕ್ಕೆ ಕೈ, ಕಮಲ ಜಿದ್ದಾಜಿದ್ದಿ

ಬೆಂಗಳೂರು: ರಾಜ್ಯದ ಏಳು ಮೀಸಲು ಲೋಕಸಭಾ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದರೆ ತಮ್ಮ ಗುರಿ ತಲುಪುವುದು ಸುಲಭ ಎಂಬ ಲೆಕ್ಕಾಚಾರದಲ್ಲಿರುವ ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಈ ಕ್ಷೇತ್ರಗಳ ಮೇಲೆ ವಿಶೇಷ ಕಣ್ಣಿಟ್ಟಿವೆ. ಈ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ರಣತಂತ್ರಗಳನ್ನು ರೂಪಿಸುವ ಕೆಲಸದಲ್ಲಿ ಮಗ್ನವಾಗಿವೆ.

ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ 7 ಮೀಸಲು ಕ್ಷೇತ್ರಗಳಿದ್ದು ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಈ ಏಳೂ ಮೀಸಲು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದವು. ಆಗ ಆಡಳಿತದಲ್ಲಿದ್ದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟಕ್ಕೆ ಶೂನ್ಯ ಸಂಪಾದನೆ ಸಿಕ್ಕಿತ್ತು. ಮೀಸಲು ಕ್ಷೇತ್ರಗಳಲ್ಲೂ ವಿಜಯ ಪತಾಕೆ ಹಾರಿಸುವ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಹಾಗೂ ಕ್ಷೇತ್ರಗಳನ್ನು ಬಿಜೆಪಿ ಕಬಳಿಸಿತ್ತು.

ಆದರೆ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ತುಸು ಚಿತ್ರಣ ಬದಲಾಗಿದೆ. ರಾಜ್ಯದ ಒಟ್ಟು 51 ಮೀಸಲು ಕ್ಷೇತ್ರಗಳ ಪೈಕಿ 36 ಪರಿಶಿಷ್ಟ ಜಾತಿ ಹಾಗೂ 15 ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಈ 51 ಮೀಸಲು ಕ್ಷೇತ್ರಗಳಲ್ಲಿ ಅತ್ಯಧಿಕ 35 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಅಂದರೆ 36 ರಲ್ಲಿ 21 ಪರಿಶಿಷ್ಟ ಜಾತಿ ಹಾಗೂ 15 ರಲ್ಲಿ 14 ಕಡೆ ಪರಿಶಿಷ್ಟ ಪಂಗಡದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸುವ ಮೂಲಕ ದಾಖಲೆ ಬರೆದಿತ್ತು. ಉಳಿದಂತೆ ಬಿಜೆಪಿ 12 (ಎಸ್‌ಸಿ) ಕಡೆ ಜಯಗಳಿಸಿದ್ದರೆ ಪರಿಶಿಷ್ಟ ಪಂಗಡದ ಒಂದೂ ಕ್ಷೇತ್ರದಲ್ಲೂ ತನ್ನ ಖಾತೆ ತೆರೆದಿಲ್ಲ. ಜೆಡಿಎಸ್‌ 3 ಎಸ್‌ಸಿ ಹಾಗೂ ಒಂದು ಎಸ್‌ಟಿ ಕ್ಷೇತ್ರದಲ್ಲಿ ಜಯಗಳಿಸಿದೆ. ಈ ಅಂಕಿ ಅಂಶಗಳನ್ನು ಅವಲೋಕಿಸಿದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಚಂಡ ಜಯಕ್ಕೆ ಈ ಮೀಸಲು ಕ್ಷೇತ್ರಗಳು ದೊಡ್ಡ ಕೊಡುಗೆ ನೀಡಿವೆ.

ಈ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದು ಬಿಜೆಪಿ-ಜೆಡಿಎಸ್‌ಗೆ ದೊಡ್ಡ ಸವಾಲಾಗಿದ್ದರೆ ಆ ಕ್ಷೇತ್ರಗಳನ್ನು ಬಿಜೆಪಿ ತೆಕ್ಕೆಯಿಂದ ಕಸಿದುಕೊಳ್ಳುವುದು ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆಯಾಗಿದೆ.

ಬಲಾಬಲ
ವಿಜಯಪುರ: ಹಾಲಿ ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ ವಿರುದ್ಧ ಕಾಂಗ್ರೆಸ್‌ನ ರಾಜು ಅಲಗೂರು ಕಣದಲ್ಲಿದ್ದಾರೆ. ಜಿಗಜಿಣಗಿ ಹ್ಯಾಟ್ರಿಕ್‌ ಸಾಧಿಸಿ 4ನೇ ಬಾರಿಗೆ ಸ್ಪರ್ಧೆಯಲ್ಲಿದ್ದಾರೆ. ಕಳೆದ ಸಲ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನ ಡಾ| ಸುನೀತಾ ದೇವಾನಂದ ಚೌಹಾØಣ್‌ ಸ್ಪರ್ಧಿಸಿದ್ದರು. ಈಗ ಚಿತ್ರಣ ಬದಲಾಗಿದ್ದು ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದೆ. ಎಂ.ಬಿ. ಪಾಟೀಲ್‌ ಮತ್ತು ಶಿವಾನಂದ ಪಾಟೀಲ್‌ ಕ್ಷೇತ್ರದ ಸಚಿವದ್ವಯರು ಜತೆಗೆ ಬಿಜೆಪಿಯ ಫೈರ್‌ಬ್ರಾಂಡ್‌ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಕ್ಷೇತ್ರದಲ್ಲಿರುವ ಪ್ರಮುಖ ನಾಯಕ.

ಕಲಬುರಗಿ: ಹಾಲಿ ಬಿಜೆಪಿ ಸಂಸದ ಡಾ| ಉಮೇಶ್‌ ಜಾಧವ್‌ 2ನೇ ಬಾರಿಗೆ ಕಣದಲ್ಲಿದ್ದು ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಚುನಾವಣೆ ಎದುರಿಸುತ್ತಿದ್ದಾರೆ. ಕಳೆದ ಚುನಾವಣೆಯನ್ನು ಖರ್ಗೆ ಅವರನ್ನು ಜಾಧವ್‌ ಅವರು 95 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು.
ರಾಯಚೂರು: ಬಿಜೆಪಿ ಸಂಸದ ರಾಜ ಅಮರೇಶ್ವರ ನಾಯಕ 2ನೇ ಬಾರಿಗೆ ಕಣದಲ್ಲಿದ್ದು ಅವರ ವಿರುದ್ಧ ನಿವೃತ್ತ ಐಎಎಸ್‌ ಅಧಿಕಾರಿ ಕುಮಾರ ನಾಯಕ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಇಲ್ಲಿ ಮಾಜಿ ಸಂಸದ ಬಿ.ವಿ. ನಾಯಕ್‌ ಕೂಡ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಅವರ ಅಸಮಾಧಾನದ ಬಿಸಿ ಬಿಜೆಪಿಗೆ ತಟ್ಟಿದೆ.

ಬಳ್ಳಾರಿ: ಸೋನಿಯಾಗಾಂಧಿ ಹಾಗೂ ಸುಷ್ಮಾ ಸ್ವರಾಜ್‌ ನಡುವಿನ ಸ್ಪರ್ಧೆಯಿಂದ ಇಡೀ ದೇಶದ ಗಮನ ಸೆಳೆದಿದ್ದ ಬಳ್ಳಾರಿ ಕ್ಷೇತ್ರ ಮರುವಿಂಗಡಣೆ ಬಳಿಕ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. 2014ರಲ್ಲಿ ಸಂಸದರಾಗಿದ್ದ ಬಿ.ಶ್ರೀರಾಮುಲು ಈಗ ಮತ್ತೆ ಬಿಜೆಪಿ ಅಭ್ಯರ್ಥಿ. ಅವರ ವಿರುದ್ಧ ಮಾಜಿ ಸಚಿವ ಹಾಗೂ ಸಂಡೂರು ಶಾಸಕ ತುಕರಾಂ ಕಾಂಗ್ರೆಸ್‌ ಅಭ್ಯರ್ಥಿ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿರುವುದು ಶ್ರೀರಾಮುಲುಗೆ ಬಲಬಂದಂತೆ ಆಗಿದೆ.

ಚಿತ್ರದುರ್ಗ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಬದಲಿಗೆ ಈ ಸಲ ಮಾಜಿ ಸಚಿವ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನನ್ನು ಸಮಾಧಾನಪಡಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ.

ಕೋಲಾರ: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ಕಳೆದುಕೊಂಡಿದ್ದು ಜೆಡಿಎಸ್‌ನ ಮಲ್ಲೇಶ ಬಾಬು ಮೈತ್ರಿ ಅಭ್ಯರ್ಥಿ. ಇಬ್ಬರ ಜಗಳದಿಂದ ಮೂರನೇಯವರಿಗೆ ಲಾಭ ಎಂಬಂತೆ ಗೌತಮ್‌ ಕಾಂಗ್ರೆಸ್‌ ಅಭ್ಯರ್ಥಿ. 7 ಸಲ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕೆ.ಎಚ್‌.ಮುನಿಯಪ್ಪ ಅಳಿಯನಿಗೆ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಕೊನೆಗೂ ಟಿಕೆಟ್‌ ಸಿಗಲಿಲ್ಲ, ಅಸಮಾಧಾನದ ಎಫೆಕ್ಟ್ ಇದ್ದೇ ಇರುತ್ತದೆ.

ಚಾಮರಾಜನಗರ: ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ರಾಜಕೀಯ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಬಾಲರಾಜ್‌ ಬಿಜೆಪಿ ಅಭ್ಯರ್ಥಿ. ಸಚಿವ ಎಚ್‌.ಸಿ.ಮಹದೇವಪ್ಪ ಪುತ್ರ ಸುನೀಲ್‌ಬೋಸ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೊದಲ ಚುನಾವಣೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಮೀಸಲು ಕ್ಷೇತ್ರಗಳು ಯಾವುವು?
ಪರಿಶಿಷ್ಟ ಪಂಗಡ
 ಬಳ್ಳಾರಿ
 ರಾಯಚೂರು
ಪರಿಶಿಷ್ಟ ಜಾತಿ
 ಚಾಮರಾಜನಗರ,
 ಕೋಲಾರ
 ಚಿತ್ರದುರ್ಗ
 ವಿಜಯಪುರ
 ಕಲಬುರಗಿ

-ಎಂ.ಎನ್‌. ಗುರುಮೂರ್ತಿ

ಟಾಪ್ ನ್ಯೂಸ್

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.