Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Team Udayavani, Mar 19, 2024, 12:07 PM IST
ಬೆಂಗಳೂರು: ನಗದು ಠೇವಣಿ ಅಥವಾ ಹಿಂಪಡೆಯುವಿಕೆ ಮೊತ್ತ 10 ಲಕ್ಷ ರೂ.ಗಿಂತ ಅಧಿಕವಿದ್ದರೆ ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ರವಾನಿಸಲಾಗುವುದು ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬ್ಯಾಂಕ್ ನೋಡಲ್ ಅಧಿಕಾರಿಗಳ ಸಭೆ ನಡೆಸಿದರು.
ಯಾವುದೇ ಪೂರ್ವನಿದರ್ಶನವಿಲ್ಲದೆ ಚುನಾವಣಾ ಪ್ರಕ್ರಿಯೆ ಸಮಯದಲ್ಲಿ ಹಲವು ವ್ಯಕ್ತಿಗಳ ಖಾತೆಗಳಿಗೆ ಒಂದು ಬ್ಯಾಂಕ್ ಖಾತೆಯಿಂದ ಆರ್.ಟಿ.ಜಿ.ಎಸ್/ನೆಫ್ಟ್ ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವುದು, ಯಾವುದೇ ನಗದು ಠೇವಣಿ ಅಥವಾ 1 ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳ ಬಗ್ಗೆ ಚುನಾವಣಾ ವಿಭಾಗಕ್ಕೆ ಶೀಘ್ರ ಮಾಹಿತಿ ನೀಡುವಂತೆ ಬ್ಯಾಂಕ್ ನೋಡಲ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹಲವು ಖಾತೆಗಳಿಗೆ ಹಣ ವರ್ಗಾವಣೆ: ಒಂದೇ ಖಾತೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಜತೆಗೆ ಚುನಾವಣಾ ಆಯೋಗ ಕೂಡ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾ ಟುಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೆ ಚುನಾವಣಾ ವಿಭಾಗದ ಗಮನಕ್ಕೆ ತರಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಆಸ್ತಿಗಳಲ್ಲಿ 72 ಗಂಟೆಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆಯಬೇಕು. ಇಲ್ಲವಾದಲ್ಲಿ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರಾಮ ಚಂದ್ರ ನಾಯ್ಕ…, ಮುಖ್ಯ ಲೆಕ್ಕಾಧಿಕಾರಿ ಭೀನಾ, ವಿವಿಧ ಬ್ಯಾಂಕ್ ಗಳ ನೋಡಲ್ ಅಧಿಕಾರಿಗಳು, ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗುವುದು: ಸೆಲ್ವಮಣಿ :
ಯಾವುದೇ ಬ್ಯಾಂಕ್‌ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನೆ ಮಾಡಬೇಕು. ಒಂದು ವೇಳೆ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿದರೆ. ಅಂತಹ ಹಣವನ್ನು ಸೀಜ್ ಮಾಡಿಕೊಂಡು ಕಾನೂನಿನ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.