Lok Sabha Elections; ಪ್ರತೀ ಕ್ಷೇತ್ರ; 2-3 ಲಕ್ಷ ಮತ ಹೆಚ್ಚಳ ಗುರಿ!

2 ದಿನಗಳಲ್ಲಿ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ರಚನೆಗೆ ಅಮಿತ್‌ ಶಾ ತಾಕೀತು

Team Udayavani, Apr 3, 2024, 6:30 AM IST

BJP-JDSLok Sabha Elections; ಪ್ರತೀ ಕ್ಷೇತ್ರ; 2-3 ಲಕ್ಷ ಮತ ಹೆಚ್ಚಳ ಗುರಿ!

ಬೆಂಗಳೂರು: ಎರಡು ದಿನಗಳಲ್ಲಿ ಅಗತ್ಯ ಇರುವ ಕಡೆ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ರಚಿಸುವಂತೆ ತಾಕೀತು ಮಾಡಿರುವ ಅಮಿತ್‌ ಶಾ, ಪ್ರತೀ ಲೋಕಸಭಾ ಕ್ಷೇತ್ರದಲ್ಲೂ ಕಳೆದ ಬಾರಿಗಿಂತ ಕನಿಷ್ಠ 2ರಿಂದ 3 ಲಕ್ಷ ಹೆಚ್ಚು ಮತಗಳನ್ನು ಗಳಿಸಬೇಕು ಎಂದು ಗುರಿ ನೀಡಿದ್ದಾರೆ.

ಅಷ್ಟೇ ಅಲ್ಲ, ಅಭ್ಯರ್ಥಿ ಯಾರೆಂಬುದಕ್ಕಿಂತ ಮೋದಿ ಅವರು ಮತ್ತೆ ಪ್ರಧಾನಿ ಆಗುವುದು ಮುಖ್ಯ. ಏನೇ ವೈಯಕ್ತಿಕ ವೈಮನಸ್ಸಿದ್ದರೂ ಬದಿಗೊತ್ತಿ ಒಟ್ಟಾಗಿ ಕೆಲಸ ಮಾಡಿ, ಒಳ್ಳೆಯ ಭವಿಷ್ಯವಿದೆ. ಕಾಂಗ್ರೆಸ್‌ ಸರಕಾರ ಎಲ್ಲಿ ಎಡವುತ್ತದೆಯೋ ಅಲ್ಲಿ ನಿಗಾ ಇಟ್ಟಿರಿ ಎಂದು ಕಟ್ಟಪ್ಪಣೆ ಮಾಡಿದರು.

ಮಂಗಳವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ನಡೆಸಿದ ಅವರು, 28 ಕ್ಷೇತ್ರಗಳ ಚಿತ್ರಣ ವನ್ನು ಉಭಯ ಪಕ್ಷಗಳ ನಾಯಕರೆದುರು ತೆರೆದಿಟ್ಟರು. ಯಾವ್ಯಾವ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಸುಲಭ, ಎಲ್ಲೆಲ್ಲಿ ಜೆಡಿಎಸ್‌ನ ಸಹಕಾರ ಮತ್ತು ಪರಿಶ್ರಮ ಎಷ್ಟು ಬೇಕು, ಜೆಡಿಎಸ್‌ ಆಯ್ಕೆ ಮಾಡಿರುವ 3 ಕ್ಷೇತ್ರಗಳಲ್ಲಿ ಬಿಜೆಪಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸ್ವತಃ ವಿವರಿಸಿದರು.

ಕಳೆದ ಚುನಾವಣೆಯಲ್ಲಿ ವಿರೋಧಿಗಳಾಗಿದ್ದ ಬಿಜೆಪಿ-ಜೆಡಿಎಸ್‌ ಇಂದು ಮಿತ್ರಪಕ್ಷವಾಗಿದ್ದೇವೆ. ತಳಮಟ್ಟದಲ್ಲಿ ಕಾರ್ಯಕರ್ತರು ಪರಸ್ಪರ ಒಂದಾಗುವುದು ಕಷ್ಟವಿದೆ. ಆದರೂ ಸಮನ್ವಯ ಸಾಧಿಸಲೇಬೇಕು. ಅಗತ್ಯಬಿದ್ದರೆ ಲೋಕಸಭೆ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರವಾರು ಸಮನ್ವಯ ಸಮಿತಿ ರಚಿಸಿ ಎಂದರು. ಬಹುತೇಕ ವಿಧಾನಸಭಾ ಕ್ಷೇತ್ರವಾರು ಸಮನ್ವಯ ಸಮಿತಿ ರಚಿಸಿ, ಸಭೆ ನಡೆಸಿರುವುದಾಗಿ ಕುಮಾರಸ್ವಾಮಿ ಮತ್ತು ವಿಜಯೇಂದ್ರ ವಿವರಣೆ ನೀಡಿದರು. ಎಲ್ಲೆಲ್ಲಿ ಸಮನ್ವಯ ಸಮಿತಿ ಆಗಿಲ್ಲವೋ ಅಲ್ಲೆಲ್ಲ ಎರಡು ದಿನಗಳಲ್ಲಿ ಸಮಿತಿ ರಚಿಸಿ, ಸಭೆ ನಡೆಸಬೇಕು ಎಂದು ತಾಕೀತು ಮಾಡಿದರು.

ಬಿಜೆಪಿ-ಜೆಡಿಎಸ್‌ ಒಂದಾಗಿರುವುದರಿಂದ ಕನಿಷ್ಠ 2ರಿಂದ 3 ಲಕ್ಷ ಮತ ಗಳಿಕೆ ಪ್ರತೀ ಕ್ಷೇತ್ರದಲ್ಲಿ ಹೆಚ್ಚಾಗಬೇಕು. ಸಮನ್ವಯ ಸಾಧಿಸುವಲ್ಲಿ ಎರಡೂ ಕಡೆಯಿಂದ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರಲ್ಲದೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದೆ. ಹಣಬಲ, ತೋಳ್ಬಲ ಬಳಸಬಹುದು. ನಿಗಾ ಇಡಿ. ಅವರು ಎಡವಿದರೆ ತಪ್ಪದೆ ಚುನಾವಣ ಆಯೋಗದ ಗಮನಕ್ಕೆ ತನ್ನಿ ಎಂದು ಸೂಚಿಸಿದರು.

ಇಂದು ವಿಶ್ವನಾಥ್‌ ಮನೆಯಲ್ಲಿ
ಸುಧಾಕರ್‌ ಉಪಾಹಾರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ| ಕೆ. ಸುಧಾಕರ್‌ಗೆತಲೆನೋವಾಗಿದ್ದ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ವಿಚಾರವೂ ಸಭೆಯಲ್ಲಿ ಬಗೆಹರಿದಿದ್ದು, ಬುಧವಾರ ಬೆಳಗ್ಗೆ ಉಪಾಹಾರಕ್ಕೆ ಸುಧಾಕರ್‌ ಅವರರನ್ನು ವಿಶ್ವನಾಥ್‌ ಮನೆಗೆ ಕರೆದೊಯ್ಯುವ ಜವಾಬ್ದಾರಿಯನ್ನು ಚುನಾವಣ ಉಸ್ತುವಾರಿ ರಾಧಾಮೋಹನ್‌ ಅಗರ್‌ವಾಲ್‌ ಅವರಿಗೆ ಅಮಿತ್‌ ಶಾ ವಹಿಸಿದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.