Lok Sabha Elections; ಮತ್ತೊಮ್ಮೆ ಪುಟಿದೇಳುವ ವಿಶ್ವಾಸದಲ್ಲಿ ಜೆಡಿಎಸ್
ರಾಜ್ಯ ಜೆಡಿಎಸ್‌ಗೆ ಪುಷ್ಟಿ ನೀಡಿದ ಕುಮಾರಸ್ವಾಮಿ ನಾಯಕತ್ವ
Team Udayavani, Jun 4, 2024, 9:21 PM IST
ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾವಣೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್‌ನ ಅಸ್ತಿತ್ವ ನಿರ್ಧರಿಸುವ ಚುನಾವಣೆ ಎನ್ನುವಂತೆಯೇ ಬಿಂಬಿತವಾಗಿತ್ತು.
2019ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್, 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು. ಈ ಬಾರಿ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸಿದ ಮೂರರ ಪೈಕಿ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಕುಮಾರಸ್ವಾಮಿ ಅವರ ಅಧ್ಯಕ್ಷತೆಯೂ ಗೆದ್ದಿದೆ.
ತಾವು ರಾಜ್ಯಾಧ್ಯಕ್ಷ ಇರುವಾಗಲೇ ಲೋಕಸಭೆ ಚುನಾವಣೆಯಲ್ಲಿ 2 ಸ್ಥಾನ ಗೆದ್ದಿರುವುದು ಒಂದು ಸಾಧನೆ. ಆದರೆ, ಕಳೆದ ಬಾರಿ ಕಳೆದುಕೊಂಡಿದ್ದ ಮಂಡ್ಯದಲ್ಲಿ ತಾವೇ ನಿಂತು ಗೆದ್ದಿರುವುದು ಮತ್ತೂಂದು ಸಾಧನೆ. ಈ ಮೂಲಕ ಮಂಡ್ಯ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ಕುಮಾರಸ್ವಾಮಿ, ಹಳೇ ಮೈಸೂರು ಭಾಗದಲ್ಲಿ ಮತ್ತೆ ಪುಟಿದೇಳುವ ವಿಶ್ವಾಸವನ್ನು ಪಕ್ಷಕ್ಕೆ ಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎನ್. ಮಂಜುನಾಥ್ ಅವರನ್ನು ಜೆಡಿಎಸ್ ಬದಲು ಬಿಜೆಪಿಯಿಂದ ಸ್ಪರ್ಧೆಗಿಳಿಸುವ ತಂತ್ರ ಹೂಡಿದ ಕುಮಾರಸ್ವಾಮಿ, ರಾಜಕೀಯ ತಂತ್ರಗಾರಿಕೆಯಲ್ಲೂ ಪಾರಮ್ಯ ಮೆರೆದಿದ್ದಾರೆ. ಒಟ್ಟಾರೆ ಕುಮಾರಸ್ವಾಮಿ ಅವರ ನಾಯಕತ್ವ ಮತ್ತೊಮ್ಮೆ ರಾಜ್ಯ ಜೆಡಿಎಸ್‌ಗೆ ಪುಷ್ಟಿ ನೀಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.