Lok Sabha Elections: ಮಾ.16, 18: ಮೋದಿ ರಾಜ್ಯ ಪ್ರವಾಸ
Team Udayavani, Mar 13, 2024, 11:37 PM IST
ಲೋಕಸಭೆ ಚುನಾವಣೆ,Lok Sabha Elections
ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿಗೆ ದಿನಾಂಕ ನಿಗದಿಯಾಗಿದ್ದು, ಮಾ.16ರಂದು ಕಲಬುರಗಿ ಹಾಗೂ ಮಾ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ಬುಧವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ರಾಜ್ಯದಲ್ಲಿ ಎರಡು ದಿನಗಳ ಕಾಲ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳುತ್ತಿದ್ದು, ಇದಕ್ಕಾಗಿ ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.
ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್‌ಗಳನ್ನಾಗಿ ನಾವು ವಿಂಗಡಿಸಿದ್ದೇವೆ. ಸ್ಥಳೀಯ ರಾಜಕೀಯ ಮತ್ತು ಭೌಗೋಳಿಕ ಹಿನ್ನೆಲೆಯನ್ನು ಕಣ್ಮುಂದೆ ಇಟ್ಟುಕೊಂಡು ಆ 8 ಕ್ಲಸ್ಟರ್‌ಗಳಲ್ಲಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ಮತ್ತು ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ.
ಈಗಾಗಲೇ ಆ 8 ಕ್ಲಸ್ಟರ್‌ಗಳಿಗೆ ರಾಷ್ಟ್ರೀಯ ನಾಯಕರ ಪ್ರವಾಸಗಳು ಮುಕ್ತಾಯವಾಗಿವೆ. ಮೈಸೂರಿಗೆ ಅಮಿತ್ ಶಾ, ಕಲಬುರಗಿಗೆ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಳಗಾವಿಗೆ, ದೇವೇಂದ್ರ ಫಡ್ನವೀಸ್ ಮಂಗಳೂರಿಗೆ ಬಂದಿದ್ದರು. 8 ಕ್ಲಸ್ಟರ್‌ಗಳಲ್ಲೂ ಪ್ರವಾಸ ಮುಗಿದಿದೆ.
ಮಾ.16ರಂದು ಕಲಬುರಗಿಯ ಎನ್‌ವಿ ಆಟದ ಮೈದಾನದಲ್ಲಿ ಹಾಗೂ ಮಾ.18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ಪ್ರಧಾನಿ ಮಾತನಾಡಲಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಿತ ಅನೇಕ ಗಣ್ಯರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.