Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

ಚುನಾವಣೆ ಅವಲೋಕನ ಸಭೆಯಲ್ಲಿ ಬಿಜೆಪಿ ಪ್ರಮುಖರ ವಿಶ್ವಾಸ

Team Udayavani, May 12, 2024, 7:15 AM IST

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

ಬೆಂಗಳೂರು: ಲೋಕಸಭಾ ಚುನಾವಣೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬಿಜೆಪಿ ಕಚೇರಿಯಲ್ಲಿ ಮಹತ್ವದ “ಅವಲೋಕನ’ ಸಭೆ ನಡೆದಿದ್ದು, 22 ಸ್ಥಾನಗಳಲ್ಲಿ ಎನ್‌ಡಿಎಗೆ ಗೆಲುವು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ನಡೆದಿದ್ದು, ವಿಪಕ್ಷ ನಾಯಕರಾದ ಆರ್‌.ಅಶೋಕ್‌, ಕೋಟ ಶ್ರೀನಿವಾಸ್‌ ಪೂಜಾರಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಭಾಗವಹಿಸಿದ್ದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಿಜೆಪಿಯ ಸಂಖ್ಯಾಬಲ ಕಡಿಮೆ ಯಾಗುವ ಸಾಧ್ಯತೆ ಬಗ್ಗೆ ಪರೋಕ್ಷ ಅಭಿಪ್ರಾಯ ವ್ಯಕ್ತವಾಗಿದೆಯಾದರೂ, ಯಾವುದೇ ಕ್ಷೇತ್ರದ ಅಭ್ಯರ್ಥಿಯಾಗಲಿ, ಚುನಾವಣ ಉಸ್ತುವಾರಿಯಾಗಲಿ ಸೋಲಿನ ಭೀತಿಯನ್ನು ವ್ಯಕ್ತಪಡಿಸಿಲ್ಲ ಎಂದು ತಿಳಿದು ಬಂದಿದೆ. ಸರಾಸರಿ ಮತದಾನದ ಆಧಾರದ ಮೇಲೆ ಬಿಜೆಪಿ ಹಾಗೂ ಜೆಡಿಎಸ್‌ ಗೆಲ್ಲುವ ಕ್ಷೇತ್ರಗಳ ಮತಗಳ ಅಂತರದ ಮೇಲೆ ಮೂರು ರೀತಿಯ ವರ್ಗೀಕರಣ ಮಾಡಲಾಗಿದೆ. ಪ್ರಹ್ಲಾದ್‌ ಜೋಷಿ, ಬಿ.ವೈ.ರಾಘವೇಂದ್ರ, ತೇಜಸ್ವಿ ಸೂರ್ಯ, ರಾಜವಂಶಸ್ಥ ಯದುವೀರ್‌ ಮೊದಲಾದವರು ಭಾರೀ ಅಂತರದಿಂದ ಗೆಲ್ಲುವ ಅಂದಾಜು ಮಾಡಲಾಗಿದೆ. ಆದರೆ ಕರಾವಳಿಯ 3 ಕ್ಷೇತ್ರಗಳು ಸಹಿತ ಮಹತ್ವದ ಸಂಘಟನಾತ್ಮಕ ಕ್ಷೇತ್ರಗಳಲ್ಲಿ ಮತಗಳ ಅಂತರ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಜತೆಗೆ ಕಡಿಮೆ ಅಂತರದಿಂದ ಗೆಲ್ಲುವ ಕ್ಷೇತ್ರಗಳ ಪಟ್ಟಿಯನ್ನು ಮಾಡಲಾಗಿದೆ.

ರಾಜ್ಯ ಸರಕಾರದ ಗ್ಯಾರಂಟಿ ಯೋಜ ನೆಗಳ ಮಧ್ಯೆಯೂ ರಾಜ್ಯದ ಜನರು ನರೇಂದ್ರ ಮೋದಿಯವರ ಪರವಾಗಿ ಮತ ಚಲಾಯಿಸಲು ಬದ್ಧ ರಾಗಿರುವುದು ಸಭೆಯಲ್ಲಿ ಪ್ರಸ್ತಾವ ವಾಗಿದ್ದು, ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆ ಸಮಸ್ಯೆ ಸೃಷ್ಟಿ ಯಾದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಜತೆಗೆ ಕೆಲವು ಕ್ಷೇತ್ರಗಳಲ್ಲಿ ಹಣಕಾಸು ವಿಚಾರವಾಗಿ ಅಭ್ಯರ್ಥಿಗಳು ಸಮಸ್ಯೆ ಎದುರಿಸಬೇಕಾಯಿತು ಎಂಬ ಬೇಸರವೂ ವ್ಯಕ್ತವಾಗಿದೆ.

ಜತೆಗೆ ಪರಿಷತ್‌ ಚುನಾವಣೆ ಸಿದ್ಧತೆ ಬಗ್ಗೆಯೂ ಚರ್ಚೆಯಾಗಿದೆ. ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ನಾಲ್ವರು ಪ್ರಭಾರಿಗಳ ನೇಮಕದ ಜತೆಗೆ 25 ಮತದಾರರಿಗೆ ಒಬ್ಬ ಪ್ರಮುಖರ ನೇಮಕಕ್ಕೆ ಸೂಚನೆ ನೀಡಲಾಗಿದೆ. ಅಭ್ಯರ್ಥಿ ಅಂತಿಮಗೊಳಿಸುವುದು ತಡವಾದರೂ ಒಂದು ವರ್ಷದ ಹಿಂದಿನಿಂದಲೇ ತಯಾರಿ ನಡೆದಿರುವುದರಿಂದ ಸಮಸ್ಯೆಯಾಗು ವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಮುಖರ ಮಧ್ಯೆ ಕುಳಿತ ಯದುವೀರ್‌
ಸಭೆಗೆ ಆಗಮಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಅಭ್ಯರ್ಥಿಗಳು ಹಾಗೂ ಪ್ರಮುಖರ ಮಧ್ಯೆಯೇ ಕುಳಿತಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ, ಬಸವರಾಜ್‌ ಬೊಮ್ಮಾಯಿ ಸಹಿತ ಕೆಲವು ಪ್ರಮುಖ ಅಭ್ಯರ್ಥಿಗಳು ಸಭೆಗೆ ಗೈರಾಗಿದ್ದರು.

ಸರಕಾರದ ವಿರುದ್ಧ ಬಿಜೆಪಿ 152 ಚುನಾವಣ ದೂರು
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ರಾಜ್ಯ ಕಾಂಗ್ರೆಸ್‌ ಸರಕಾರ ಆಡಳಿತ ಯಂತ್ರವನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಂಡಿದ್ದು, ಸರಕಾರದ ವಿರುದ್ಧ 152 ದೂರುಗಳನ್ನು ಚುನಾವಣ ಆಯೋಗಕ್ಕೆ ನೀಡಲಾಗಿದೆ ಎಂದು ಬಿಜೆಪಿ ಚುನಾವಣೆ ನಿರ್ವಹಣ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್‌ ಕುಮಾರ್‌ ತಿಳಿಸಿದರು.

ಲೋಕಸಭಾ ಚುನಾವಣೆ ಅವಲೋಕನ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಎಲ್ಲ ಜಿÇÉೆ- ತಾಲೂಕುಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ. ಕಾರ್ಯಕರ್ತರ ವಿರುದ್ಧ ಅಪಾರ ಮೊಕದ್ದಮೆ ದಾಖಲಿಸಲಾಗಿದೆ. ಇವುಗಳ ವಿರುದ್ಧ ಸ್ಥಳೀಯವಾಗಿ ದೂರು ಕೊಡಲಾಗಿದೆ. ರಾಜಕೀಯವಾಗಿಯೂ ನಾವು ಈ ಆಕ್ರಮಣವನ್ನು ಎದುರಿಸುತ್ತೇವೆ ಎಂದು ಹೇಳಿದರು.

60 ಸಾವಿರಕ್ಕೂ ಹೆಚ್ಚು ಬೂತ್‌ ಸಭೆ
ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹಿತ 14 ಜನ ರಾಷ್ಟ್ರೀಯ ಪ್ರಮುಖರು 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದರು. 39 ಕಡೆಗಳಲ್ಲಿ ರೋಡ್‌ ಶೋ ನಡೆದಿವೆ. ರಾಜ್ಯ ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ ಮತ್ತು ಆರ್‌.ಅಶೋಕ್‌ ಸಹಿತ ಸುಮಾರು 30 ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್‌ ಶೋ ನಡೆಸಿದ್ದಾರೆ ಎಂದು ವಿವರಿಸಿದರು.

ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆ, 180ಕ್ಕೂ ಹೆಚ್ಚು ರೋಡ್‌ ಶೋಗಳನ್ನು ಮಾಡಲಾಗಿದೆ. ಕಾಂಗ್ರೆಸ್‌ ಅಪಪ್ರಚಾರ ಬಗ್ಗೆ ಹಾಗೂ ಕಾಂಗ್ರೆಸ್‌ ಅಪಾಯಕಾರಿ ಎಂದು ತಿಳಿಸಲು ಮನೆಯಂಗಳದಲ್ಲಿ ಸಭೆ ನಡೆಸಿದ್ದೇವೆ. 50-75 ಜನರನ್ನು ಒಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಸಣ್ಣ ಸಭೆಗಳನ್ನು ಬೂತ್‌ ಮಟ್ಟದಲ್ಲಿ ನಡೆಸಿರುವುದು ಈ ಚುನಾವಣೆಯ ವಿಶೇಷ ಎಂದು ತಿಳಿಸಿದರು.

ಕಾಂಗ್ರೆಸ್‌ ಸರಕಾರ ಅವರದೇ ಅಂತಃಕಲಹದ ಭಾರದಲ್ಲಿ ಕುಸಿದು ಬೀಳಲಿದ್ದು, ಅವರು ಬಿದ್ದಾಗ ನಮ್ಮ ರಾಜಕಾರಣ ನಡೆಸುತ್ತೇವೆ. ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್‌ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ.
-ವಿ. ಸುನಿಲ್‌ಕುಮಾರ್‌, ಬಿಜೆಪಿ ನಾಯಕ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.