ಲೋಕಸಭಾ ಚುನಾವಣೆ: ರಾಜ್ಯ ರಾಜಕೀಯಕ್ಕೆ ಹೊಸ ಭಾಷ್ಯ


Team Udayavani, Mar 11, 2019, 12:35 AM IST

vidana-souda.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ 2014ರಲ್ಲಿನ ರಾಜಕೀಯ ಪರಿಸ್ಥಿತಿಗೂ, ಈಗಿನ ಪರಿಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ.

ಆಗ ಸ್ವತಂತ್ರವಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್‌-ಜೆಡಿಎಸ್‌ ಇದೀಗ ಒಟ್ಟಾಗಿದ್ದರೆ, ಬಿಜೆಪಿ, ಎರಡೂ ಪಕ್ಷಗಳ ಮೈತ್ರಿ ಎದುರಿಸುವ ಹೊಸ ಸವಾಲು ಎದುರಿಸುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಹೆಚ್ಚಿನ ಸ್ಥಾನ ಗಳಿಸಿ ಆ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ಗುರಿ ಕಾಂಗ್ರೆಸ್‌-ಜೆಡಿಎಸ್‌ನದ್ದಾಗಿದೆ. ಆದರೆ, ಎರಡೂ ಪಕ್ಷಗಳಿಗೆ ಒಂದು ಸೀಟನ್ನೂ ಹೆಚ್ಚಾಗಿ ಗೆಲ್ಲಲು ಬಿಡದೆ ಮೈತ್ರಿ ಸರ್ಕಾರಕ್ಕೆ ಸಂಚಕಾರ ತರುವ ದೂರಾಲೋಚನೆ ಬಿಜೆಪಿಯದು.

ಕಾಂಗ್ರೆಸ್‌ -ಜೆಡಿಎಸ್‌, ಸಮ್ಮಿಶ್ರ ಸರ್ಕಾರದ 9 ತಿಂಗಳ ಸಾಧನೆ ಹಾಗೂ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ವೈಫ‌ಲ್ಯಗಳನ್ನು ಅಸ್ತ್ರ ಮಾಡಿಕೊಂಡು ಚುನಾವಣೆಗೆ ಸಿದಟಛಿವಾಗಿದ್ದರೆ, ಬಿಜೆಪಿ, ಕೇಂದ್ರದಲ್ಲಿ ಐದು ವರ್ಷ ಸುಭದ್ರ ಸರ್ಕಾರ ನೀಡಿದ್ದೇವೆ. ಉಗ್ರರ ವಿಚಾರದಲ್ಲಿ ಪಾಕ್‌ ವಿರುದ್ಧ  ದಿಟ್ಟತನ ಪ್ರದರ್ಶಿಸಿದ್ದೇವೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸದಾ ಅಸ್ಥಿರತೆಯಿಂದ ನರಳುತ್ತಿದೆ ಎಂಬ ಟೀಕಾಸ್ತ್ರ ಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಸಜ್ಜಾಗಿದೆ.

ಈ ಚುನಾವಣೆ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಭವಿಷ್ಯದ ರಾಜಕೀಯದ ಮೇಲೆ ಪರಿಣಾಮ ಬೀರುವುದಂತೂ ಹೌದು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸೀಟು ಹೊಂದಾಣಿಕೆ ಎರಡು, ಮೂರು ದಿನಗಳಲ್ಲಿ ಸ್ಪಷ್ಟಗೊಳ್ಳುವುದರಿಂದ, ಬಿಜೆಪಿಯಲ್ಲೂ ಎರಡು ದಿನಗಳಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷೆ ಇರುವುದರಿಂದ ರಾಜಕೀಯ ಚಟುವಟಿಕೆಗಳು  ಗರಿಗೆದರಲಿವೆ. ಕಾಂಗ್ರೆಸ್‌- ಜೆಡಿ ಎಸ್‌, ಜತೆಗೂಡಿ ಚುನಾವಣೆ ಎದುರಿಸುವ ತೀರ್ಮಾನ ಮಾಡಿ ಮಾಡಿರುವುದರಿಂದ ಸಹಜವಾಗಿ ಬಿಜೆಪಿಗೆ ಸ್ವಲ್ಪ$ಆತಂಕವಂತೂ ಇದ್ದೇ ಇದೆ. ಆದರೆ, ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಸೀಟು ಹೊಂದಾಣಿಕೆ ಬಿಕ್ಕಟ್ಟಾಗಿ ಪರಿಣಮಿಸಿರುವುದರಿಂದ ತಳಮಟ್ಟದ ಅಸಮಾಧಾನ ತನಗೆ ಲಾಭವಾಗಬಹುದು ಎಂಬ ನಿರೀಕ್ಷೆಯೂ ಬಿಜೆಪಿಯದ್ದಾಗಿದೆ.

ಬಿಜೆಪಿ ತೆಕ್ಕೆಯಲ್ಲಿರುವ ಮೈಸೂರು, ಬೆಂಗಳೂರು, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕೇಂದ್ರ, ಉತ್ತರ ಕನ್ನಡ, ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಕಾರ್ಯತಂತ್ರ ರೂಪಿಸಿವೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದಲೇ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧ್ಯವಾಯಿತು. ಇದೀಗ ಎರಡೂ ಪಕ್ಷಗಳು ಒಟ್ಟಾಗಿ ಒಂದೇ ಆಭ್ಯರ್ಥಿ ಹಾಕಿದರೆ ತಮಗೆ ಲಾಭವಾಗಬಹುದು ಎಂಬ ನಿರೀಕ್ಷೆ ಬಿಜೆಪಿಯದು. ಏಕೆಂದರೆ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿಗೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸೋಲುಂಟಾಗಿತ್ತು.

ಇನ್ನು, ಜೆಡಿಎಸ್‌ಗೆ ಯಾವ ರೂಪದಲ್ಲಿ ನೋಡಿದರೂ ಲಾಭ. ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದರೆ ಹಾಸನ, ಮಂಡ್ಯ ಈಗಲೂ ಉಳಿಸಿಕೊಳ್ಳಬಹುದು. ಕಾಂಗ್ರೆಸ್‌ ಬೆಂಬಲ ಸಿಕ್ಕರೆ ಶಿವಮೊಗ್ಗ ಹಾಗೂ ಸೀಟು ಹಂಚಿಕೆಯಡಿ ಕ್ಷೇತ್ರ ಬಿಟ್ಟು ಕೊಟ್ಟರೆ ಬೆಂಗಳೂರು ಉತ್ತರ, ಮೈಸೂರು, ವಿಜಯಪುರ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಹಾಲಿ ಇರುವ ಸಂಖ್ಯಾಬಲವನ್ನು 4 ಅಥವಾ 5ಕ್ಕೆ ಹೆಚ್ಚಿಸಿಕೊಳ್ಳುವ ತವಕ ಜೆಡಿಎಸ್‌ನದು. ಆದರೆ, ಸೀಟು ಹಂಚಿಕೆಯಡಿ ಜೆಡಿಎಸ್‌ ಬಯಸಿದಷ್ಟು ಸೀಟು ಸಿಗುವುದಾ? ಎಂಬುದನ್ನು ಕಾದು ನೋಡಬೇಕಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಹಾಗೂ ಜೆಡಿಎಸ್‌ 2 ಸ್ಥಾನ ಗಳಿಸಿದ್ದವು. ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬಳ್ಳಾರಿ ಸ್ಥಾನ ಕಳೆದುಕೊಂಡಿತು. ಬೆಂಗಳೂರು ದಕ್ಷಿಣ ಸಂಸದರಾಗಿದ್ದ ಕೇಂದ್ರ ಸಚಿವರೂ ಆಗಿದ್ದ ಅನಂತಕುಮಾರ್‌ ಅವರು ನಿಧನರಾಗಿರುವುದರಿಂದ ಆ ಸ್ಥಾನ ತೆರವಾಗಿದೆ. ಪ್ರಸ್ತುತ ಬಿಜೆಪಿ 15, ಕಾಂಗ್ರೆಸ್‌ 10, ಜೆಡಿಎಸ್‌ 2 ಸ್ಥಾನ ಹೊಂದಿವೆ.

ಹಿಂದೆ ಏನಾಗಿತ್ತು?
2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದ ಬಿ.ಎಸ್‌.ಯಡಿಯೂರಪ್ಪ, ಶ್ರೀರಾಮುಲು, ಪ್ರಕಾಶ್‌ ಹುಕ್ಕೇರಿಯವರು ಸಂಸದ ಸ್ಥಾನಕ್ಕೆ ಸ್ಪರ್ಧೆ ಮಾಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಎರಡು ಕಡೆ, ಬಿಜೆಪಿ ಒಂದು ಕಡೆ ಮಾತ್ರ ಗೆದ್ದಿತ್ತು. 2019ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಗೆ ಸ್ಪರ್ಧಿಸಿ, ಆಯ್ಕೆಯಾದರು. ನಂತರ, ನಡೆದ ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ, ಮಂಡ್ಯದಲ್ಲಿ ಜೆಡಿಎಸ್‌, ಶಿವಮೊಗ್ಗದಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದ್ದವು.

ಎಸ್‌.ಲಕ್ಷ್ಮೀ ನಾರಾಯಣ 

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.