ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ
Team Udayavani, Jun 15, 2022, 10:58 AM IST
ಬೆಂಗಳೂರು: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಗರದ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಫಾರಸು ಮತ್ತು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು, ವಿಧಾನ ಪರಿಷತ್ತಿನ ಸಭಾಪತಿ, ವಿಧಾನಸಭೆಯ ಸ್ಪೀಕರ್ ಹಾಗೂ ಉಭಯ ಸದನಗಳ ಪ್ರತಿಪಕ್ಷ ನಾಯಕರ ಶಿಫಾರಸುಗಳನ್ನು ಸಮಾಲೋಚಿಸಿ ನ್ಯಾ. ಬಿ.ಎಸ್. ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ:ಹೊಸ ಲೋಕಾಯುಕ್ತ ನೇಮಕ ಬೆನ್ನಲ್ಲೇ ಬಿಜೆಪಿಗೆ ಶುರುವಾಯ್ತು ಟೀಕೆ
ಈ ವರ್ಷದ ಜನವರಿಯಲ್ಲಿ ನ್ಯಾ. ವಿಶ್ವನಾಥ್ ಶೆಟ್ಟಿ ಅವರ ನಿವೃತ್ತಿಯಿಂದ ಲೋಕಾಯುಕ್ತ ಹುದ್ದೆ ತೆರವಾಗಿತ್ತು. 5 ತಿಂಗಳ ಬಳಿಕ ಈಗ ಸರ್ಕಾರ ಹಾಲಿ ಉಪಲೋಕಾಯುಕ್ತ-1 ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾ.ಪಾಟೀಲ್‌ರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.