MUDA ಮಾಜಿ ಆಯುಕ್ತ ನಟೇಶ್ಗೆ ಲೋಕಾ ನೋಟಿಸ್
Team Udayavani, Nov 17, 2024, 12:43 AM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ಶನಿವಾರ ನೋಟಿಸ್ ಜಾರಿಯಾಗಿದ್ದು, ನ. 19ರಂದು ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ಬರು ವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 2021ರಲ್ಲಿ ವಿಜಯನಗರದ ವಿವಿಧ ಬಡಾವಣೆಗಳಲ್ಲಿ 14 ಬದಲಿ ನಿವೇಶನ ಹಂಚಿಕೆ ಯಾದ ಸಂದರ್ಭ ನಟೇಶ್ ಮುಡಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.