Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

ರಾಮನಗರ,ಕಾರವಾರ ಬೀದರ್ ನಲ್ಲಿ ಕಾರ್ಯಾಚರಣೆ... 20 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ಪಿಡಿಒ!!

Team Udayavani, Mar 27, 2024, 9:03 AM IST

1-aaaa

ಎಇಇ ಪ್ರಕಾಶ್ ರೇವಣಕರ್ ಮನೆ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆಡೆ ಭ್ರಷ್ಟರ ಬೇಟೆಗಿಳಿದಿದ್ದಾರೆ.

ರಾಮನಗರ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಚನಾಯ್ಕನಹಳ್ಳಿ ಗ್ರಾಪಂ ಪಿಡಿಒ ಯತೀಶ್ ರನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿಗಳಿಸಿದ ದೂರಿನ ಹಿನ್ನೆಲೆ ಪಿಡಿಒಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಮೈಸೂರು, ಚನ್ನಪಟ್ಟಣದಲ್ಲಿ ಮನೆಗಳನ್ನ ಹೊಂದಿದ್ದು, ಒಟ್ಟು ಏಳು ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.ಬಿಡದಿಯ ಬಾಡಿಗೆ ಮನೆ ಈಗಲ್ಟನ್ ರೆಸಾರ್ಟ್ ನಲ್ಲಿ ಯತೀಶ್ ನನ್ನ ವಶಕ್ಕೆ ಪಡೆಯಲಾಗಿದೆ.

ಮೈನಾಯಕನಹಳ್ಳಿ ಪಿಡಿಒ ಮೇಲೂ ದಾಳಿ
ಚನ್ನಪಟ್ಟಣ ತಾಲೂಕಿನ ಮೈನಾಯಕನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಶಿಭಾ ನಿಖಾತ್ ಮನೆ ಮೇಲೂ‌ ದಾಳಿ ನಡೆಸಲಾಗಿದೆ.

ಚನ್ನಪಟ್ಟಣದಲ್ಲಿ ಮನೆ ಹೊಂದಿರೋ ಶೀಭಾ ಮನೆ ಮೇಲೆ ದಾಳಿ‌ ಮಾಡಿರುವ ಅಧಿಕಾರಿಗಳು ಯತೀಶ್ ಹಾಗೂ ಶಿಭಾ ನಿಖಾತ್ ಒಂದೇ ಬ್ಯಾಚ್ ಪಿಡಿಒಗಳಾಗಿದ್ದಾರೆ. ಇಬ್ಬರ ಮೇಲೂ ಅಕ್ರಮ ಆಸ್ತಿ ಗಳಿಕೆ ದೂರು ಕೇಳಿ ಬಂದಿತ್ತು.

ಯತೀಶ್ 20 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ..

ಕಾರವಾರದಲ್ಲೂ ಕಾರ್ಯಾಚರಣೆ

ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಇಇ) ಪ್ರಕಾಶ್ ರೇವಣಕರ್ ಮನೆ, ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಐಶ್ವರ್ಯ ರೆಸಿಡೆನ್ಸಿ, ಪ್ರಕಾಶ್ ರೇವಣಕರ್ ಮನೆ, ನಗರಾಭಿವೃದ್ಧಿ ಪ್ರಾಧಿಕಾದ ಕಚೇರಿಯಲ್ಲಿ ದಾಖಲೆಗಳ ಹಾಗೂ ಅಕ್ರಮ ಸಂಪತ್ತಿನ ತಪಾಸಣೆ ನಡೆಯುತ್ತಿದೆ. ಅಪಾರ ಪ್ರಮಾಣದ ಬಂಗಾರ, ಹಣ, ವಿವಿದೆಡೆ ಆಸ್ತಿ ಮಾಡಿರುವ ದಾಖಲೆಗಳು ಸಿಗುವ ಸಂಭವವಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಕಾರವಾರ ಲೋಕಾಯುಕ್ತ ಎಸ್ಪಿ ಹಾಗೂ ಪಕ್ಕದ ಜಿಲ್ಲೆಯ ಎಸ್ಪಿ ದಾಳಿಯ ನೇತೃತ್ವ ವಹಿಸಿದ್ದಾರೆ.

ಬೀದರ್ ನಲ್ಲಿ ಕಾರ್ಯಾಚರಣೆ
ಬೀದರ್ ಕಾರಂಜಾ ವಿಭಾಗದ ಇಇ ಶಿವಕುಮಾರ ಸ್ವಾಮಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದ್ದಾರೆ. ಅಕ್ರಮ ಅಸ್ತಿ ಗಳಿಕೆ ಆರೋಪ ಹಿನ್ನಲೆ ಲೋಕಾಯುಕ್ತ ಡಿವೈಎಸ್.ಪಿ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಬೀದರ್ ಅಗ್ರಿಕಲ್ಚರ್ ಕಾಲೋನಿಯ ಮನೆ, ನಾಗೂರ (ಬಿ) ಗ್ರಾಮದ ಮನೆ,ಭಾಲ್ಕಿಯಲ್ಲಿರುವ ಕಾರಂಜಾ ಕಚೇರಿ, ಕಲ್ಬುರ್ಗಿ ಪಟ್ಣಣದ ಮನೆಯಲ್ಲಿ ಅಧಿಕಾರಿಗಳಿಂದ ಶೋಧ ನಡೆಸಲಾಗುತ್ತಿದೆ.

ಮಹತ್ವದ ದಾಖಲೆ ವಶಪಡಿಸಿ ಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ KRIDL EE ಸದಾಶಿವಯ್ಯ ಅವರ ಚಿಕ್ಕಬಳ್ಳಾಪುರ ಕಚೇರಿ, ಆಸ್ತಿ ಪಾಸ್ತಿ ಮೇಲೆ ದಾಳಿ ನಡೆಸಲಾಗಿದೆ.

ಯಲಹಂಕ ಬಾಡಿಗೆ ಮನೆ, ಮೈಸೂರಿನ ರಾಮಕೃಷ್ಣ ನಗರದ ಮನೆ, ಬಗಾದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮನೆ, ಟಿ.ನರಸೀಪುರದ ಒಕ್ಕಲಿಗೆರೆ ಮನೆ ಸೇರಿದಂತೆ ಆಸ್ತಿಗಳ ಮೇಲೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ದಿ ಮತ್ತು ಡಿವೈಎಸ್ಪಿ ವಿರೇಂದ್ರ ಕುಮಾರ್,ಮೋಹನ್ ಶಿವಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬಾಗಲಕೋಟ ಎಆರ್ ಟಿಒ ಮನೆ ಮೇಲೆ ದಾಳಿ

ವಿಜಯಪುರ : ವಿಜಯಪುರ ನಗರದಲ್ಲಿರುವ ಬಾಗಲಕೋಟ ಜಿಲ್ಲೆಯ ಎಆರ್ ಟಿಒ ಮತ್ತು ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರದ ಚಾಲುಕ್ಯ ನಗರದಲ್ಲಿ ಇರುವ ಬಾಗಲಕೋಟ ಜಿಲ್ಲೆಯ ಜಮಖಂಡಿ ಪ್ರಾದೇಶಿಕ ಸಾರಿಗೆ ಕಛೇರಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಅವರ ಮನೆ ಹಾಗೂ ಅವರ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ನೇತೃತ್ವದಲ್ಲಿ ಡಿಎಸ್ಪಿ ಸುರೆಶರೆಡ್ಡಿ, ಸಿಪಿಐ ಆನಂದ ಠಕ್ಕನವರ ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆಯ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.