ಲೋಕಾಯುಕ್ತರಿಗೇ ಇರಿತ:ಬಿಜೆಪಿ ಹೋರಾಟಕ್ಕೆ ಹೊಸ ಅಸ್ತ್ರ
Team Udayavani, Mar 7, 2018, 4:16 PM IST
ಬೆಂಗಳೂರು: ಹಾಡಹಗಲೇ ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ನಡೆದಿರುವ ಇರಿತ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು , ಗೂಂಡಾ ರಾಜ್ಯ ಎನ್ನುವುದು ಈಗ ಸ್ಪಷ್ಟವಾಗಿದೆ ಎಂದು ಕಿಡಿ ಕಾರಿದೆ.
ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರು ಈ ಬಗ್ಗೆ ತೀವ್ರ ಕಿಡಿ ಕಾರಿದ್ದು ‘ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ದಾಳಿ ನಡೆದಿದೆ. ಹಲವು ಆರೋಪಿಗಳ ಮೇಲಿನ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೈ ಬಿಟ್ಟಿದೆ. ಅದರ ಫಲ ಇದು. ಈ ಹೊಣೆಯನ್ನು ಸಿದ್ದರಾಮಯ್ಯ ಅವರು ಹೊರ ಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು’ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರೂ ಘಟನೆಯನ್ನು ಖಂಡಿಸಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ ಎಂದಿದ್ದಾರೆ.
ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣ ,ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಬಿಜೆಪಿಗೆ ಲೋಕಾಯುಕ್ತರ ಮೇಲೆ ನಡೆದಿರುವ ದಾಳಿ ಇನ್ನೊಂದು ಅಸ್ತ್ರವಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.