ಬರಿಗಣ್ಣಿನಿಂದ ಸೂರ್ಯನನ್ನೇ ಹತ್ತು ನಿಮಿಷ ದಿಟ್ಟಿಸಿ ನೋಡಿ ವಿಶ್ವದಾಖಲೆ
Team Udayavani, Jan 21, 2019, 2:10 AM IST
ಬೆಳಗಾವಿ: ಮಧ್ಯಾಹ್ನದ ಹೊತ್ತಿನಲ್ಲಿ ಬರಿಗಣ್ಣಿನಿಂದ ಸೂರ್ಯನನ್ನು ಸುಮಾರು 10 ನಿಮಿಷಗಳ ಕಾಲ ದಿಟ್ಟಿಸಿ ನೋಡುವ ಮೂಲಕ ಬೆಳಗಾವಿ ಭಾಗ್ಯ ನಗರದ ನಿವಾಸಿ, ತೆರಿಗೆ ಸಲಹೆಗಾರ ಪ್ರದೀಪ ಸಾಸನೆ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಗರದ ಲೇಲೇ ಮೈದಾನದಲ್ಲಿ ಎಲ್ಲರ ಸಮ್ಮುಖದಲ್ಲಿ ಪ್ರದೀಪ ಸಾಸನೆ ಅವರು ಬರಿಗಣ್ಣಿನಿಂದಲೇ ಸೂರ್ಯನನ್ನು ದಿಟ್ಟಿಸಿ ನೋಡಿದರು. ಸೂರ್ಯನ ಪ್ರಖರತೆ ಹೆಚ್ಚಾಗಿದ್ದರೂ ಸ್ವಲ್ಪವೂ ಕಣ್ಣು ಪಿಳಿಕಿಸದೆ ಅದ್ಭುತ ಸಾಹಸ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಪ್ರದೀಪ ನಿರಂತರ 10 ನಿಮಿಷಗಳ ಕಾಲ ಸೂರ್ಯನನ್ನೇ ನೋಡುತ್ತ ನಿಂತರು. ನೆರೆದವರು ಚಪ್ಪಾಳೆ ತಟ್ಟುವುದರ ಮೂಲಕ ಪ್ರದೀಪ ಅವರನ್ನು ಹುರಿದುಂಬಿಸಿದರು.
ಕೇವಲ ನಾಲ್ಕೆçದು ಸೆಕೆಂಡ್ ಸೂರ್ಯನನ್ನು ನೋಡಲು ಆಗುವುದಿಲ್ಲ. ಇಂಥದ್ದರಲ್ಲಿ ಸೂರ್ಯನನ್ನೇ
ಹೆಚ್ಚು ಹೊತ್ತು ನೋಡುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಮೊದ ಮೊದಲು 10 ಸೆಕೆಂಡ್‌ನಿಂದ ಆರಂಭಿಸಿ 1, 2,4 ನಿಮಿಷಗಳವರೆಗೆ ಹೆಚ್ಚಿಸುತ್ತ ಈಗ ಸತತ 10 ನಿಮಿಷಗಳವರೆಗೆ ಸೂರ್ಯನನ್ನು ನೋಡಿ ವಿಶ್ವ ದಾಖಲೆಯ ಬುಕ್‌ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ.
ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಭಾರತ ಘಟಕದ ಅಧ್ಯಕ್ಷ ಸಂತೋಷ ಶುಕ್ಲಾ, ಕೇಂದ್ರ ಸಂಸ್ಕೃತಿ ಸಚಿವಾಲಯದ ಭರತ ಶರ್ಮಾ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪಮೆಯರ್ ಮಧುಶ್ರೀ ಪೂಜಾರಿ ಸೇರಿ ಇತರರು ಪ್ರದೀಪ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ನಿಪ್ಪಾಣಿ ಅಪ್ಪಾಚಿವಾಡಿಯಹಾಲಸಿದಟಛಿನಾಥ ದೇವಸ್ಥಾನದಲ್ಲಿ ಅನ್ನಪ್ರಸಾದ ಕೈಗೊಳ್ಳುತ್ತ ಬಂದಿದ್ದೇನೆ. 2015ರಲ್ಲಿ ಸೂರ್ಯ ನಮಸ್ಕಾರ ಮಾಡುವಾಗ ಸೂರ್ಯ ಉದಯಿಸುವಾಗ ನೋಡುವ ಹವ್ಯಾಸ ಬೆಳೆಸಿಕೊಂಡಿದ್ದೇನೆ.ಮುಂದಿನ ದಿನಗಳಲ್ಲಿ ಸುಮಾರು ಅರ್ಧ ಗಂಟೆವರೆಗೂ ಸೂರ್ಯನನ್ನು ನೋಡುವ ಗುರಿ ಇಟ್ಟುಕೊಂಡಿದ್ದೇನೆ.
● ಪ್ರದೀಪ ಸಾಸನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.