ಲವ್ ಜಿಹಾದ್ ಪ್ರಕರಣ: ಹಿಂದೂಯೇತರರ ವಾಹನಕ್ಕೆ ನಿಷೇಧ ಹೇರಿ ಸೌತಡ್ಕದಲ್ಲಿ ಫ್ಲೆಕ್ಸ್ ಅಳವಡಿಕೆ
Team Udayavani, Jun 3, 2022, 12:38 PM IST
ಬೆಳ್ತಂಗಡಿ: ಜಿಲ್ಲೆಯಲ್ಲಿ ಕೋಮ ಸೌಹಾರ್ದ ಕೆಡಿಸುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೊಕ್ಕಡದಲ್ಲಿ ಇತ್ತೀಚೆಗೆ ಆಟೋ ಚಾಲಕನ ಲವ್ ಜಿಹಾದ್ ಪ್ರಕರಣ ಹಿನ್ನಲೆಯಲ್ಲಿ ಕೊಕ್ಕಡ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಕಟೌಟ್ ಒಂದು ಅಳವಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕೊಕ್ಕಡದ ಅನ್ಯಕೋಮಿನ ಯುವಕನೊಂದಿಗೆ ಯುವತಿಯ ಪ್ರೇಮಾಂಕುರ ವಿಷಯಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಗಳು ಯುವಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದ ಬೆನ್ನಲ್ಲೇ ಜೂ.3 ರಂದು ಈ ಕಟೌಟ್ ಸಾರ್ವಜನಿಕ ಸ್ಥಳದಲ್ಲಿ ಕಂಡುಬಂದಿದೆ.
ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂಜಾಗರಣ ವೇದಿಕೆ ಕೊಕ್ಕಡ ಪ್ರಕಟನೆ ಎಂದು ಬರೆದಿದ್ದು, ಬಳಿಕ ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆಯಲಾಗಿದೆ.
ಇದನ್ನೂ ಓದಿ:ಪುತ್ತೂರು: ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಯುವಕ: ಘಟನೆ ಬಗ್ಗೆ ಪೊಲೀಸರ ಸ್ಪಷ್ಟನೆ
ಈ ಕುರಿತು ಸೌತಡ್ಕ ಆಡಳಿತ ಮಂಡಳಿಯಲ್ಲಿ ಪ್ರಶ್ನಿಸಿದಾಗ ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಿದ್ದರಿಂದ ದೇವಸ್ಥಾನಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಟೌಟ್ ಫೋಟೋ ಹರಿದಾಡುತ್ತಿದ್ದು, ಕಟೌಟ್ ಅಳವಡಿಸಿರುವವರ ಕುರಿತು ಸಂಬಂಧ ಪಟ್ಟ ಪೊಲೀಸ್ ಇಲಾಖೆ ವಿಚಾರಣೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.